NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ ಸಂಬಂಧ ಒಕ್ಕೂಟ ನಾಳೆ ಜುಲೈ 18ರಂದು ಸುದ್ದಿಗೋಷ್ಠಿ ನಡೆಸಲಾಗುತ್ತಿದೆ.

ನಗರದ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್.ಚಂದ್ರಶೇಖರ್ ತಿಳಿಸಿದ್ದಾರೆ.

ಈ ಸಂಬಂಧಿಸಿದಂತೆ ಸರ್ಕಾರ ಚುನಾವಣಾ ಪೂರ್ವದಲ್ಲಿ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಿಗೆ ಇರುವ ಹುದ್ದೆವಾರು ಸರಿಸಮಾನ ವೇತನ ಹಾಗೂ ಸೌಲಭ್ಯಗಳನ್ನು ನೀಡುವ ಪ್ರಣಾಳಿಕೆ ಭರವಸೆಗಳನ್ನು, 38 ತಿಂಗಳ ವೇತನ ಹಿಂಬಾಕಿ ನೀಡುವ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸದೆ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯಿಂದ ಬೇಸತ್ತಿರುವ ಸಾರಿಗೆ ನೌಕರರಿಗೆ ಅನ್ಯ ಮಾರ್ಗವಿಲ್ಲದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲು ನಿರ್ಧಾರಿಸಲಾಗುತ್ತಿದೆ.

ಹಾಗಾಗಿ ಈ ಹೋರಾಟದ ವಿಚಾರದ ಬಗ್ಗೆ ತಿಳಿಸಲು ಸುದ್ದಿಗೋಷ್ಠಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!