ಬೆಂಗಳೂರು: ಕೊರೊನಾ ರಾಜ್ಯದಲ್ಲಿ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ರಾಜ್ಯದಲ್ಲಿ ಮತ್ತೆ 22 ಸೋಂಕಿತರು ಪತ್ತೆಯಾಗಿದ್ದು, ಜತೆಗೆ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಈ ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ಇನ್ನು ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಏ.26ರಂದು ಪಾರ್ಶ್ವವಾಯುವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಲ್ಲಿ ಸೊಂಕು ಪತ್ತೆಯಾಗಿದ್ದರಿಂದ ಐಸಿಯುಗೆ ವರ್ಗಾಯಿಸಲಾಗಿತ್ತು. ಗುರುವಾರ ಬೆಳಗ್ಗೆ ಸೆಪ್ಟಿಕ್ ಶಾಕ್ ನಿಂದ ಮೃತಪಟ್ಟಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ನ್ಯುಮೋನಿಯಾ ಮತ್ತು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಆಂಧ್ರ ಪ್ರದೇಶದ ಅನಂತಪುರದ 60 ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಕಡಿಮೆ ರಕ್ತದ ಒತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬುಧವಾರ ಸಂಜೆಯಿಂದ ಗುರುವಾರದ ಮಧ್ಯಾಹ್ನದವರೆಗೆ ಐವರು ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಡನೆ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ 456ಕ್ಕೆ ತಲುಪಿದೆ.
ಇಂದು ಬೆಂಗಳೂರು ಪಾದರಾಯನಪುರದಲ್ಲಿ ಮತ್ತೆ ಐವರಿಗೆ ಸೋಂಕು ಕಾಣಿಸಿಕೊಂಡಿದ್ದು ಅವರಲ್ಲಿ ನಾಲ್ವರು ರೋಗಿ ಸಂಖ್ಯೆ 554ರ ನಿಕಟ ಸಂಪರ್ಕಕ್ಕೆ ಬಂದಿದ್ದರು. ಇನ್ನು ಮಂಡ್ಯ, ಬೀದರ್, ಗದಗ ಜಿಲ್ಲೆಗಳಲ್ಲಿ ತಲಾ ನಾಲ್ಕು, ದಾವಣಗೆರೆಯಲ್ಲಿ ಮೂವರು, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ತಲಾ ಒಂದೊಂದು ಸೋಂಕು ಇರಿವುದು ದೃಢಪಟ್ಟಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail