ರಾಮನಗರ: ಹೂ ಬೆಳೆದು ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಪರಿಹಾರಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದ್ದು ಮೇ 26ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಹೂ ಬೆಳೆಗಾರರಿಗೆ ತಿಳಿಸಿದ್ದಾರೆ.
2020-21ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಹೂವು ಬೆಳೆಗಾರರಿಗೆ ಪರಿಹಾರಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಹೂವಿನ ಬೆಳೆಗಾರರಿಗೆ ಪರಿಹಾರಧನ ಕಾರ್ಯಕ್ರಮದಡಿ ಪ್ರತಿ ಫಲಾನುಭವಿಗೆ ಗರಿಷ್ಠ 1 ಹೆಕ್ಟೇರ್ ಪ್ರದೇಶಕ್ಕೆ 25,000 ರೂ. ಮೀರದಂತೆ ಪರಿಹಾರಧನವನ್ನು ನೀಡಲಾಗುವುದು. ಬಹುವಾರ್ಷಿಕ ಹಾಗೂ ವಾರ್ಷಿಕ ಹೂ ಬೆಳೆಗಳಿಗೆ 2019ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆ ಆಧರಿಸಿ ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕೋವಿಡ್-19 ನಿಂದಾಗಿ ರಾಜ್ಯದಲ್ಲಿ 2020 ಮಾರ್ಚ್ ತಿಂಗಳಿಂದ ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳು ಮುಚ್ಚಿದ್ದು, ಹಬ್ಬ, ಮದುವೆ, ಸಭೆ ಸಮಾರಂಭಗಳು ಹಾಗೂ ಮತ್ತಿತರೆ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಹೂವಿನ ಬೆಳೆಗಳಿಗೆ ಬೇಡಿಕೆ ಇಲ್ಲದ ಕಾರಣ ಹೂ ಬೆಳೆಗಾರರು ತಾವು ಬೆಳೆದಂತಹ ಹೂಗಳನ್ನು ಕಟಾವು ಮಾಡದೆ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಅವರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail