ನ್ಯೂಡೆಲ್ಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ಸೋಂಕಿತರ ಸಂಖ್ಯೆ 81,997ಕ್ಕೆ ಏರಿದೆ. ಈವರೆಗೆ 2,649 ಜನರು ಬಲಿಯಾಗಿದ್ದಾರೆ.
ಇನ್ನು 27,969 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ನಡುವೆ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅದರಲ್ಲಿ ಮಹಾರಾಷ್ಟ್ರದಲ್ಲಿ ಈವರೆಗೆ 1,019 ಮಂದಿ ವಿಶ್ವಮಾರಿಯಿಂದ ಅಸುನೀಗಿದ್ದಾರೆ. ಒಟ್ಟು 27,524 ಮಂದಿಗೆ ಈವರೆಗೆ ಸೋಂಕು ತಗುಲಿದೆ. 6,059 ಮಂದಿ ಸೋಂಕಿನಿಂದ ಇಲ್ಲಿ ಗುಣಮುಖರಾಗಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಅದೇರೀತಿ ಗುಜರಾತ್‍ನಲ್ಲಿ 9,592 ಮಂದಿ ಸೋಂಕಿಗೆ ತುತ್ತಾಗಿದ್ದು, 586 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 9,674 ಮಂದಿಗೆ ಕೊರೊನಾ ತಗುಲಿದ್ದು, 66 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 8,470 ಮಂದಿ ತುತ್ತಾಗಿದ್ದು, 115 ಮಂದಿ ಮೃತಪಟ್ಟಿದ್ದಾರೆ. 3,045 ಮಂದಿ ಸೋಂಕು ಗೆದ್ದು ಬಂದಿದ್ದಾರೆ.
ಕರ್ನಾಟಕದಲ್ಲಿ ಈವರೆಗೆ 987 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿದೆ. ಒಟ್ಟು 460 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 2,205 ಮಂದಿಗೆ ಸೋಂಕು, 48 ಮಂದಿ ಮೃತ. 1,192 ಜನರು ರೋಗದಿಂದ ಮುಕ್ತಗೊಂಡಿದ್ದಾರೆ.
ತೆಲಂಗಾಣದಲ್ಲಿ 1,414 ಮಂದಿ ಕೊರೊನಾಗೆ ತುತ್ತಾಗಿದ್ದು, 34 ಮಂದಿ ಬಲಿಯಾಗಿದ್ದಾರೆ. ಕೇರಳದಲ್ಲಿ 561 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ. 493 ಮಂದಿ ಕೊರೊನಾದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail