ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೂರ್ವ ವಲಯ ಆಯುಕ್ತರ ಕಚೇರಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆಯ ಅಹವಾಲಿನ ಕಾರ್ಯಕ್ರಮದಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ ಹೆಚ್.ಆರ್.ಬಿ.ಆರ್ ಲೇಔಟ್ ನ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷಗಳ ಸಂಗ್ರಹದಿಂದಾಗಿ ನೆರೆಹೊರೆಯವರಿಗೆ ತೊಂದರೆಯಾಗುತ್ತಿರುವುದರ ಕುರಿತು ಅಹವಾಲು ಸಲ್ಲಿಸಿದರು.
ಅಹವಾಲಿಗೆ ಪ್ರತಿಕ್ರಿಯಿಸಿದ ವಲಯ ಆಯುಕ್ತರು ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷ ಸಂಗ್ರಹವಾದಲ್ಲಿ ನಾಗರಿಕರಿಗೆ ತೊಂದರೆಯಾದಂತಹ ಸಂದರ್ಭದಲ್ಲಿ ಅಂತಹ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ನೀಡಿ, ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಮಶಾನ ಭೂಮಿಯ ದುರಸ್ತಿ ಮಾಡಿ: ಕೆ.ಎಸ್.ಎಫ್.ಸಿ ಲೇ ಔಟ್ ನ ಸ್ಮಶಾನ ಭೂಮಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು, ಸದರಿ ಸ್ಥಳದ ದುರಸ್ತಿ ಕಾರ್ಯ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸ್ವಚ್ಛತಾ ಅಭಿಯಾನ ಕೈಗೊಳ್ಳಿ: ಎಚ್.ಆರ್.ಬಿ.ಆರ್ ಲೇ ಔಟ್‌ನಲ್ಲಿ ಹಂಚಿಕೆಯಾಗದ ಹಾಗೂ ಹಕ್ಕುದಾರರಿಲ್ಲದ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹವಾಗಿರುವುದಲ್ಲದೇ ಸ್ಥಳದ ದುರುಪಯೋಗವಾಗುತ್ತಿದ್ದು, ಮುಂದಿನ ಶುಕ್ರವಾರದಂದು ಸ್ಥಳವನ್ನು ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು. ಸದರಿ ಸ್ಥಳವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಬಳಸುವಂತೆ ತಿಳಿಸಲಾಯಿತು.
ದೂರುಗಳಿಗೆ ಶೀಘ್ರ ಸ್ಪಂದನೆ: ಸಾರ್ವಜನಿಕರ ಕುಂದುಕೊರತೆಯ ಅಹವಾಲಿನ ಕಾರ್ಯಕ್ರಮದಲ್ಲಿ ನಾಗರೀಕರಿಂದ ಬರುವ ದೂರುಗಳಿಗೆ ಶೀಘ್ರ ಸ್ಪಂದನೆಗೆ ಸೂಚನೆ ನೀಡಲಾಯಿತು. ಪೂರ್ವ ವಲಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ನಾಗರೀಕರು ಆಗಮಿಸಿ ವಲಯ ಆಯುಕ್ತರಿಗೆ ಧನ್ಯವಾದಗಳನ್ನು ತಿಳಿಸಿದರು.

23 ದೂರುಗಳ ಸ್ವೀಕಾರ: ಪೂರ್ವ ವಲಯ ವ್ಯಾಪ್ತಿಯಲ್ಲಿ ಇಂದು 23 ದೂರುಗಳನ್ನು ಸ್ವೀಕರಿಸಲಾಗಿದ್ದು, ಕಾಲಮಿತಿಯೊಳಗಾಗಿ ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಪೂರ್ವ ವಲಯ ಆಯುಕ್ತರು ಸೂಚನೆ ನೀಡಿದರು.
ಸಾರ್ವಜನಿಕರಿಂದ ಸ್ವೀಕರಿಸಿದ ಪ್ರಮುಖ ಅಹವಾಲುಗಳು: 1. ಬಂಬೂ ಬಜಾರ್ ಸಿಟಿ ಗ್ರಂಥಾಲಯದಲ್ಲಿ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುವಂತೆ ವಿನಂತಿಸಿದರು. 2. ಹೈನ್ಸ್ ರಸ್ತೆ ಶಾಖೆ ನಗರ ಕೇಂದ್ರ ಗ್ರಂಥಾಲಯದ ಕಟ್ಟಡ ಅವಶೇಷ ತೆರವಿಗೆ ಹಾಗೂ ನೀರಿನ ವ್ಯವಸ್ಥೆಗೆ ಮನವಿ ನೀಡಿದರು. 3. ಅನಧಿಕೃತ ಕಟ್ಟಡಗಳ ನಿರ್ಮಾಣದಿಂದಾಗಿ ನೆರೆಹೊರೆಯವರಿಗೆ ತೊಂದರೆಯಾಗುತ್ತಿದ್ದು ಅವುಗಳ ತೆರವಿಗೆ ಮನವಿ ಮಾಡಿದರು.
4. ಕೆ.ಎಸ್.ಎಫ್ ಸಿ ಲೇಔಟ್ ನ ಪಾಲಿಕೆಯ ಸಮುದಾಯ ಭವನವನ್ನು ಸಾರ್ವಜನಿಕ ಗ್ರಂಥಾಲಯವನ್ನಾಗಿ ಪರಿವರ್ತಿಸಲು ವಿನಂತಿಸಿದರು. 5. ವಲಯದ ಹಲವು ಪ್ರದೇಶಗಳಲ್ಲಿ ಬೀದಿ ದೀಪಗಳ ಅಳವಡಿಕೆಗೆ ಮನವಿ ನೀಡಿದರು. 6. ನಮ್ಮ ಕ್ಲಿನಿಕ್ ನ ಸೂಕ್ತ ನಿರ್ವಹಣೆಗೆ ಮನವಿ ನೀಡಲಾಯಿತು.
7. ಪಾದಾಚಾರಿಯನ್ನು ಬೀದಿಬದಿ ವ್ಯಾಪಾರಿಗಳು ಒತ್ತುವರಿ ಮಾಡಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ಅಂಗಡಿಗಳ ತೆರವಿಗೆ ವಿನಂತಿಸಿದರು. 8. ಹಂಚಿಕೆಯಾಗದ ಹಾಗೂ ಹಕ್ಕುದಾರರಿಲ್ಲದ ನಿವೇಶನಗಳ ಸಮಸ್ಯೆ ಬಗೆಹರಿಸಲು ಮನವಿ. 9. ಹೈನ್ಸ್ ರಸ್ತೆಯ ಪಾದಚಾರಿ ಮಾರ್ಗ ದುರಸ್ತಿಗೆ ಮನವಿ ನೀಡಿದರು.
ಈ ವೇಳೆ ಜಂಟಿ ಆಯುಕ್ತರಾದ ಸರೋಜ, ಉಪ ಆಯುಕ್ತರಾದ ರಾಜು, ಮುಖ್ಯ ಅಭಿಯಂತರರಾದ ಸುಗುಣ, ಆರೋಗ್ಯಾಧಿಕಾರಿಯಾದ ಭಾಗ್ಯಲಕ್ಷ್ಮಿ, ಕಾರ್ಯಪಾಲಕ ಅಭಿಯತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಡಿಜಿಎಂ, ಎಜಿಎಂ, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಿಸಿದ ಅಧಿಕಾರಿಗಳು ಇದ್ದರು.
Related


You Might Also Like
ಸಾರಿಗೆ ಬಸ್ಗಳು ಅಪಘಾತವಾದರೆ ಚಾಲಕರಿಗೆ ಡಿಎಂಗಳು ಜಾಮೀನು ಕೊಡಬೇಕು: ಸಿಟಿಎಂ ಆದೇಶ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಅಪಘಾತವಾದ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರು ಚಾಲಕರಿಗೆ ಜಾಮೀನು ನೀಡುವ ವ್ಯವಸ್ಥೆಯನ್ನು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ಮುಖ್ಯ ಸಂಚಾರ...
ಬದುಕಲಾಗುತ್ತಿಲ್ಲ ದಯಮಾಡಿ ನನಗೆ ವಿಷ ಕೊಡಿ: ನ್ಯಾಯಾಧೀಶರಲ್ಲಿ ನಟ ದರ್ಶನ್ ಮನವಿ
ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾದ ವೇಳೆ ಮನವಿ ಮಾಡಿದ್ದಾರೆ....
ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲಪತ್ತೆ: 1.17 ಕೋಟಿ ರೂ.ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ- ಇಬ್ಬರ ವಿರುದ್ಧ FIR ದಾಖಲು
ಯಾದಗಿರಿ: ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್ ಮಾಡಿ ಮಾರಾಟ ಮಾಡುತ್ತಿದ್ದ ಅಪ್ಪ ಮಕ್ಕಳಿಗೆ ಸೇರಿದ ಎರಡು ರೈಸ್ ಮಿಲ್ಗಳ ಮೇಲೆ ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ...
ಜಕ್ಕೂರು ರೈಲ್ವೆ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಾಕೀತು
3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು...
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ
ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ...
ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯ ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಕರೆ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ l ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ l ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಬೆಂಗಳೂರು ಗ್ರಾಮಾಂತರ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ...
ಕನಿಷ್ಠ ಪಿಂಚಣಿ 7500 ರೂ. ಪಡೆಯಲು EPS ಪಿಂಚಣಿದಾರರ ನಿರಂತರ ಹೋರಾಟ- 92ನೇ ಮಾಸಿಕ ಸಭೆಯಲ್ಲಿ ಹಲವು ನಿರ್ಧಾರಗಳು
ಬೆಂಗಳೂರು: ಇಪಿಎಸ್ ಪಿಂಚಣಿದಾರರ 92ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ....
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...