NEWSನಮ್ಮರಾಜ್ಯ

ಮೇ 15- ರಾಜ್ಯದಲ್ಲಿ 45 ಹೊಸ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ ಮಧ್ಯಾಹ್ನ ಸಾವಿರದ ಗಡಿ ದಾಟಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ ನಡುವೆ ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ ಒಟ್ಟು 45 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಇದರೊಡನೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 1032ಕ್ಕೆ ಏರಿದ್ದು ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆ ಆಗಿದೆ.

ದಕ್ಷಿಣ ಕನ್ನಡದಲ್ಲಿ 16, ಉಡುಪಿಯಲ್ಲಿ ಐದು, ಬೀದರ್‌, ಹಾಸನದಲ್ಲಿ ತಲಾ ಮೂರು, ಚಿತ್ರದುರ್ಗದಲ್ಲಿ ಎರಡು, ಶಿವಮೊಗ್ಗ, ಬಾಗಲಕೋಟೆ ಮತ್ತು ಕೋಲಾರದಲ್ಲಿ ತಲಾ ಒಂದೊಂದು ಪಾಸಿಟಿವ್‌ ಕೇಸ್‌ ಪತ್ತೆಯಾಗಿದೆ.  ಇನ್ನು ಕ್ವಾರಂಟೈನ್‌ನಲ್ಲಿ ಇಟ್ಟಿದ್ದ ಮಹಿಳೆ ಇಂದು ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೇಶದಲ್ಲಿ 82,103 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 82,103 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2,649 ಮಂದಿ ಮೃತಪಟ್ಟಿದ್ದಾರೆ.27,977 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 45,39,401 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 3,03,555 ಜನರು ಮೃತಪಟ್ಟಿದ್ದಾರೆ. 17,11,215 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ