ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಗನ್‌ಮ್ಯಾನ್‌ಗಳ ಬಂಧನ
ಬೆಂಗಳೂರು: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ,ಉದ್ಯಮಿ ಮುತ್ತಪ್ಪ ರೈ ಅಂತ್ಯ ಅತ್ಯಕ್ರಿಯೆವೇಳೆ ಗಾಳಿಯಲ್ಲಿ ಗುಂಡು ಹಾರಿದ 6 ಮಂದಿ ಗನ್‌ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಶುಕ್ರವಾರ ನಿಧನರಾದ ಮುತ್ತಪ್ಪ ರೈ ಅವರ ಪಾರ್ಥಿವ ಶರೀರವನ್ನು ಅವರ ನಿವಾಸ ಬಿಡದಿಯ ತೋಟದಲ್ಲಿ ಸಾರ್ವಜನಿಕರ ಪ್ರದರ್ಶನಕ್ಕೆ ಇಟ್ಟು ಬಳಿಕ ತೋಟದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಅಂತ್ಯಕ್ರಿಯೆಯೇನು ಯಾವುದೇ ವಿಘ್ನವಿಲ್ಲದೆ ನೆರವೇರಿತು. ಆದರೆ ಈ ವೇಳೆ ಗನ್‌ಮ್ಯಾನ್‌ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಅದರಿಂದ ವಿವಾದ ಸೃಷ್ಟಿಯಾಗಿದೆ. ಹೀಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇಲೆ 6 ಗನ್ ಮ್ಯಾನ್ ಗಳನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುತ್ತಪ್ಪ ರೈ ಅವರಿಗೆ ಗನ್ ಮ್ಯಾನ್ ಗಳಾಗಿ ಕೆಲಸ ಮಾಡುತ್ತಿದ್ದವರು ಗೌರವ ಸೂಚಕವಾಗಿ 5 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು.ಇದು ಈಗ ವಿವಾದಕ್ಕೆ ಕಾರಣವಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
![](https://vijayapatha.in/wp-content/uploads/2024/02/QR-Code-VP-1-1-300x62.png)