NEWSನಮ್ಮರಾಜ್ಯವಿಡಿಯೋ

ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ್

ಕುಡಿಯುವ ನೀರಿನ ಘಟಕದ ಅವ್ಯವಸ್ಥೆ, ಸ್ವಚ್ಛತೆ ಇಲ್ಲದನ್ನು ಕಂಡು ಕೆಂಡಾಮಂಡಲ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೆಂಡಾಮಂಡಲವಾದ ಕೃಷಿ ಸಚಿವರು ಹಾಗೂ ಹಿರೇಕೆರೂರು ಶಾಸಕರೂ ಆಗಿರುವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇಂದು ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ 2019 20 ನೇ ಸಾಲಿನ 5045 ಯೋಜನೆಯಡಿ ಚನ್ನಳ್ಳಿ ಗ್ರಾಮ ದಿಂದ ದೂದಿಹಳ್ಳಿ ಗ್ರಾಮದ ವರೆಗೆ ರಸ್ತೆ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಚನ್ನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು.  ಘಟಕದಲ್ಲಿ ಸರಿಯಾಗಿ ಕುಡಿಯುವ ನೀರು ಬರದಿರುವುದನ್ನು ಹಾಗೂ ಸುತ್ತಮುತ್ತ ಅಸ್ವಚ್ಛತೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಜನರಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಸರ್ಕಾರ ಕಲ್ಪಿಸಿದೆ. ಕುಡಿಯುವ ನೀರಿನ ಘಟಕವಾಗಲೀ, ಇತರೆ ಏನೇ ಆಗಲೀ ತೊಂದರೆಕಂಡು ಬಂದಲ್ಲಿ ಅಥವಾ ಸಾರ್ವಜನಿಕರಿಂದ ದೂರು ಕೇಳಿಬಂದಲ್ಲಿ ಅಧಿಕಾರಿಗಳು ಅದರತ್ತ ಗಮನಹರಿಸಿ ಸರಿಪಡಿಸುವಲ್ಲಿ ಮುಂದಾಗಬೇಕು ಎಂದರು.

ಚನ್ನಹಳ್ಳಿ ಗ್ರಾಮ ಹಿರೇಕೆರೂರಿನಿಂದ 2 ಕಿ.ಮೀ.ದೂರವಿದೆ ಎಂದು ಇಒ ಶ್ರೀನಿವಾಸ ಹಾಗೂ ಪಿಡಿಒ ಸಬೂಬು ಹೇಳಿದಾಗ, ಇರುವ 2 ಕಿ.ಮೀ.ದೂರದಲ್ಲಿ ಅಧಿಕಾರಿಗಳು ಓಡಾಡುವುದಿಲ್ಲ ಎಂದರೇನು ಅರ್ಥ? ಸ್ವಚ್ಛತೆಯೂ ಇಲ್ಲ ಎಂದು ಗದರಿದರು. ಆದಷ್ಟು ಬೇಗ ಸರಿಪಡಿಸದೇ ಹೋದಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ಪಾಟೀಲ್ ಎಚ್ಚರಿಸಿದರು.
ಉಗ್ರಾಣ ನಿಗಮದ ಅಧ್ಯಕ್ಷರಾದ ಯು.ಬಿ.ಬಣಕಾರ್,  ಬಿಜೆಪಿಯ ಮುಖಂಡರು ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ