ಬಾಗಲಕೋಟೆ: ಜು.29ರಿಂದ ಸಾರಿಗೆ ನೌಕರರ ಅಹೋರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ- ಆರಕ್ಷಕರ ಸಹಕಾರ ಕೋರಿದ ಕೂಟ


ಬಾಗಲಕೋಟೆ: ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಅಹೋರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಜುಲೈ 29ರಿಂದ ಹಮ್ಮಿಕೊಳ್ಳಲಾಗುತ್ತಿದ್ದು ತಾವು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾಂರಿಗೆ ನೌಕರರ ಕೂಟ ಮನವಿ ಮಾಡಿದೆ.
ಜು.29 ರಿಂದ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಅಹೋರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಾಡಲು ತಾವು ಅನುಮತಿ ನೀಡಬೇಕು ಎಂದು ಕೋರಿ ಸೋಮವಾರ ಮನವಿ ಸಲ್ಲಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಪಟ್ಟಂತೆ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕೂ ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಸಾರಿಗೆ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಹಾಗೂ ನಿವೃತ್ತಿ ನೌಕರರು ಜು.29 ರಿಂದ ರಾಜ್ಯಾದ್ಯಂತ ಇರುವ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ, ಬಸ್ ಘಟಕಗಳಲ್ಲಿ ಅಹೋರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ನಡೆಸಲು ತಿರ್ಮಾನಿಸಿದ್ದಾರೆ.
ಈ ಸತ್ಯಾಗ್ರಹ ಮಾಡಲು ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸ್ ಅವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ. ಅದರಂತೆ ಸಾರಿಗೆ ನೌಕರರ ಕೂಟ ಬಾಗಲಕೋಟ ವಿಭಾಗದಿಂದಲೂ ಎಸ್‌ಪಿ ಅವರಿಗೆ ಮನವಿ ಸಲ್ಲಿಸಲಾಯಿತು.
ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲೂ ಜು.29ರಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ. ಒಂದು ವೇಳೆ ಅಷ್ಟರೊಳಗೆ ಸರ್ಕಾರ ನೌಕರರ ಬೇಡಿಕೆಗಳನ್ನು ಈಡೇರಿಸಿದರೆ ಯಾವುದೇ ಸಮಸ್ಯೆ ಇಲ್ಲ ಎಂದು ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.
Related

 








