NEWSಶಿಕ್ಷಣ-

ಶಾಲೆಗಳನ್ನು ತೆರೆಯುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ

ಟ್ವಿಟ್ಟರ್‌ನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಪುನರಾರಂಭ ವಿಚಾರದಲ್ಲಿ ನಮ್ಮ ಸರ್ಕಾರ ಇನ್ನೂ ಯಾವುದೇ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ  ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ಮಹಾಮಾರಿಯ ಹಿನ್ನೆಲೆಯಲ್ಲಿ ಮತ್ತು ಲಾಕ್ ಡೌನ್ ಸ್ಥಿತಿ ಸದ್ಯಕ್ಕೆ ಚಾಲನೆಯಲ್ಲಿರುವುದ್ದು, ಈ ಪರಿಸ್ಥಿತಿಯಲ್ಲಿ ರಾಜ್ಯದ ಶಾಲೆಗಳನ್ನು ತರಾತುರಿಯಲ್ಲಿ ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಈ ವಿಚಾರದಲ್ಲಿ ರಾಜ್ಯದಲ್ಲಿನ ಪೋಷಕರು ಅನಗತ್ಯ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಶಾಲೆಗಳ ಪುನರಾರಂಭ ವಿಚಾರವಾಗಿ ವಿವಿಧ ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ವರದಿಗಳು ಅಧಿಕೃತವಲ್ಲ ಮತ್ತು ಈ ಕುರಿತಾಗಿ ಶಿಕ್ಷಣ ಇಲಾಖೆಯಾಗಲಿ ಸರ್ಕಾರವಾಗಲಿ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು  ತಮ್ಮ ಅಧಿಕೃತ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡುವ ಮೂಲಕ ಸುರೇಶ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ