CRIMENEWS

KSRTC ಬಸ್ಸಿನಲ್ಲಿ  ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ- ಆರೋಪಿ ಪೊಲೀಸ್‌ ವಶಕ್ಕೆ

ವಿಜಯಪಥ ಸಮಗ್ರ ಸುದ್ದಿ

ಪುತ್ತೂರು: ಕರ್ನಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ.

ಮಂಗಳೂರು ನಗರದ ನಿವಾಸಿ ತೌಹೀದ್‌ ಎಂಬಾತನೆ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಿಂದ ಪುತ್ತೂರು ಕಡೆಗೆ ಸಂಜೆ 6:30ರ ಸುಮಾರಿಗೆ ತೆರಳುತ್ತಿದ್ದ ಬಸ್‌ ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ ಆರೋಪಿಯು ತನ್ನ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾನೆ.

ಈ ವೇಳೆ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಬಸ್ಸಿನ ತುರ್ತು ನಿರ್ಗಮನ ಕಿಟಕಿಯ ಮೂಲಕ ಹಾರಲು ಪ್ರಯತ್ನಿಸಿದ್ದಾನೆ. ಆಗ ವಿದ್ಯಾರ್ಥಿನಿಯ ತಂದೆ ಮತ್ತು ಸಹ ಪ್ರಯಾಣಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ