NEWSನಮ್ಮರಾಜ್ಯ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ನಾಳೆಯಿಂದ ಓಡಾಟ ಶುರು !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ಓಡಾಟ ನಾಳೆಯಿಂದಲೇ ಆರಂಭವಾಗಲಿದೆ ಎಂದು ಸರ್ಕಾರ  ಘೋಷಣೆ ಮಾಡುತ್ತಿದ್ದು, ಇನ್ನು ಜಿಲ್ಲೆಗಳ ಒಳಗೆ ಮತ್ತು ಹೊರಗೆ KSRTC ಬಸ್‌ ಓಡಾಟ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನು ಅಧಿಕೃತಗೊಂಡಿಲ್ಲ.

ರಾಜ್ಯದಲ್ಲಿ ರಾತ್ರಿ ವೇಳೆಯಲ್ಲಿ ವಿಧಿಸಿರುವ  ಕರ್ಫ್ಯೂಕೂಡ ಸಡಿಲಿಸುವ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನಿಂತಿದೆ. ಇನ್ನು ಪ್ರಯಾಣಿಕರ ಸಾರಿಗೆ ತನ್ನ ಓಡಾಟ ಆರಂಭಿಸಿದರೆ. ರಾಜ್ಯದಲ್ಲಿ ಲಾಕ್‌ಡೌನ್‌ ಬಹುತೇಕ ಸಡಿಲಗೊಂಡಂತೆ ಆಗುತ್ತದೆ. ಜತೆಗೆ ಜನರ ಓಡಾಟವು ಮಾಮೂಲಿಯಾಗುತ್ತದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಹೀಗೆ ಜನರ ಓಡಾಟ ಮಾಮೂಲಿಯಾದರೆ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗುವುದು. ಅಲ್ಲದೆ ಈ ರೋಗದಿಂದ ಸಾವನ್ನಪ್ಪುವವರ ಸಂಖ್ಯೆ ಸಾಮಾನ್ಯವಾಗಿ ಏರಿಕೆ ಆಗುತ್ತದೆ. ಆದ್ದರಿಂದ ವಿಶೇಷವಾಗಿ ರಾಜ್ಯ ಸರ್ಕಾರ ಯಾವ ರೀತಿ ಕೊರೊನಾ ನಿರೋಧ ಶಕ್ತಿಯನ್ನು ಜನರಲ್ಲಿ ವೃದ್ಧಿಸುತ್ತದೋ ಎಂಬುವುದು ಸದ್ಯ ಯಕ್ಷ ಪ್ರಶ್ನೆಯಾಗಿದೆ.

ಬಸ್‌ಗಳಲ್ಲಿ ಜನರ ಓಡಾಟ ಪ್ರಾರಂಭವಾದರೆ. ಆವರಿಗೆ ಕೇವಲ ತರ್ಮಲ್‌ ಸ್ಕ್ರೀನಿಂಗ್‌ ಮಾತ್ರ ‌ ಮಾಡುವುದಾಗಿ ಹೇಳಿದೆ. ಇದರಿಂದ  ಸಾರಿಗೆ ನೌಕರರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹೀಗಾಗಿ ಸರ್ಕಾರ ಮತ್ತು ಸಾರಿಗೆ ಇಲಾಖೆ ನೌಕರರ ಆರೋಗ್ಯದ ಬಗ್ಗೆ ಯಾವ ರೀತಿ ಕಾಳಜಿ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ