ಪ್ರಣಾಳಿಕೆ ಭರವಸೆ ಈಡೇರಿಸಿ ಅಂತ ಎಲ್ಲ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿ: ಸಾರಿಗೆ ನೌಕರರ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳಲಿ ಅಥವಾ ಬಿಡಲಿ. ಆದರೆ, ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ, ನೀವು ಕೊಟ್ಟಿರುವ ಭರವಸೆ ಈಡೇರಿಸಿ ಎಂದು ಎಲ್ಲ ಸಂಘಟನೆಗಳು ಒತ್ತಾಯ ಮಾಡಿ ಎಂದು ನೌಕರರು ಆಗ್ರಹಿಸುತ್ತಿದ್ದಾರೆ.
ಇದನ್ನು ಬಿಟ್ಟು ಮತ್ತೆ ಬೇರೇನು ಮಾಡಬೇಡಿ. ಇದನ್ನು ಕೇಳಲಿಕ್ಕೆ ಜಂಟಿ ಕ್ರಿಯಾ ಸಮಿತಿಯವರಿಗೆ ಏನು ತೊಂದರೆ ಆಗುತ್ತಿದೆ ಎಂಬುವುದನ್ನು ಅವರು ಸ್ಪಷ್ಟವಾಗಿ ಹೇಳಬೇಕು ಎಂದು ಸಮಸ್ತ ಅಧಿಕಾರಿಗಳು/ನೌಕರರು ಆಗ್ರಹಿಸುತಿದ್ದಾರೆ.
ಸಮಸ್ತ ಅಧಿಕಾರಿಗಳು/ ನೌಕರರ ಪರವಾಗಿರುವರು ಮೊದಲು ನೌಕರರ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲು ಏನು ಮಾಡಬೇಕೋ ಅದನ್ನು ಮಾಡಿ. ಆ ನಂತರ ಸಂಸ್ಥೆಯ ಆರ್ಥಿಕ ಸ್ಥಿತಿ ಬಗ್ಗೆ ವಿಚಾರ ಮಾಡುವಿರಂತೆ. ಅದಕ್ಕಾಗಿ ಉಚಿತ ಬಸ್ ಪಾಸ್ಗಳನ್ನು, ಶಕ್ತಿ ಯೋಜನೆ, ಇತರ ಸಾರ್ವಜನಿಕ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರ ಕ್ರಮ ತಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ನೀವು ಮತ್ತು ನಿಮ್ಮ ಸಂಘಟನೆಗಳು ಸರ್ಕಾರದ ಪ್ರತಿನಿಧಿಗಳೋ ಅಥವಾ ಸಾರಿಗೆ ನೌಕರರ ಪ್ರತಿನಿಧಿಗಳೋ? ಅದನ್ನು ಹೇಳಿ. ಸರ್ಕಾರದ ಎಲ್ಲ ಇಲಾಖೆ, ಇತರ ನಿಗಮ ಮಂಡಳಿ ನೌಕರರ ವೇತನದಂತೆ ವೇತನ ಆಯೋಗದಂತೆ ವೇತನ ಹಾಗೂ ಅವರಂತೆ ಸಮಾನ ಪಿಂಚಣಿ ಯೋಜನೆ ಸೌಲಭ್ಯ ಕಲ್ಪಿಸಿ ಎಂದು ಒತ್ತಾಯಿಸುತ್ತಿದ್ದಾರೆ.
2020 ಜನವರಿ 1ರಿಂದ ಅನ್ವಯವಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳು ಬಾಕಿ ಇರುವ ವೇತನ ಕೊಡುವುದಕ್ಕೆ ಬೇಡಿಕೆ ಇಡಿ. ಇದಕ್ಕೆ ಒಕ್ಕೂಟದ ಸಂಘಟನೆಗಳ ಜತೆ ಜಂಟಿ ಸಂಘಟನೆಗಳು ಚರ್ಚಿಸಿ ಯೋಗ್ಯವಾದ ನಿರ್ಧಾರಕ್ಕೆ ಬನ್ನಿ.
ನಿಮಗೆ ಒಕ್ಕೂಟ ಈ ಬೇಡಿಕೆಗೆ ಬೇಷರತ್ ಬೆಂಬಲ ಕೊಡುತ್ತದೆ. ಈಗ ನಿರ್ಧಾರ ನಿಮ್ಮ ಅಂಗಳದಲ್ಲಿ ಇದೆ. ತಾವು ಒಳ್ಳೆಯ ನಿರ್ಧಾರಕ್ಕೆ ಬನ್ನಿ. ಸಾರಿಗೆ ನೌಕರರಿಗೆ ಒಳ್ಳೆಯದು ಮಾಡಿ ಎಂದು ನೌಕರರು ಒತ್ತಾಯ ಮಾಡುತ್ತಿದ್ದಾರೆ.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...