NEWSನಮ್ಮಜಿಲ್ಲೆನಮ್ಮರಾಜ್ಯ

ಇಂದು ಕರೆದಿದ್ದ KSRTC ನೌಕರರ ಸಂಧಾನ ಸಭೆಯಲ್ಲಿ ಕಾಲವಕಾಶ ಕೇಳಿದ ಆಡಳಿತ ಮಂಡಳಿ- ಆ.2ಕ್ಕೆ ಸಭೆ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್‌ 5ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೋಟಿಸ್‌ ನೀಡಿರುವ ಸಂಬಂಧ ಇಂದು ಸಂಜೆ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯು ಪ್ರಮುಖ ಬೇಡಿಕೆಗಳಾದ 38 ತಿಂಗಳ ವೇತನ ಹಿಂಬಾಕಿ ಮತ್ತು 2024ರ ಜನವರಿ 1ರಿಂದ ಜಾರಿಗೆ ಬರಬೇಕಾಗಿರುವ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್‌ 5 ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಹೀಗಾಗಿ ಸರ್ಕಾರ ಅಷ್ಟರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದೆ.

ಈ ಹಿನ್ನೆಲೆಯಲ್ಲಿ ಸಮತಿ ನೀಡಿರುವ ಮುಷ್ಕರದ ನೋಟಿಸ್‌ ಸಂಬಂಧ ಇಂದು ಕಾರ್ಮಿಕ ಇಲಾಖೆ ಆಯುಕ್ತರ ಸಮ್ಮುಖದಲ್ಲಿ ಸಮಿತಿ ಪದಾಧಿಕಾರಿಗಳು ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ನಡುವೆ ಸಂಧಾನ ಸಭೆ ನಡೆಯಿತು.

ಈ ವೇಳೆ ಜಂಟಿ ಕ್ರಿಯಾ ಸಮಿತಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ 2024 ಜನವರಿ 1ರಿಂದ ವೇತನ ಪರಿಷ್ಕರಣೆ,   ಎರಡು ಬೇಡಿಕೆಗಳ ಬಗ್ಗೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ತಿಳಿಸಿ ಈ ನಮ್ಮ ಬೇಡಿಕೆಗಳನ್ನು ಈಡೇರಿಸಲೇಬೇಕೆಂದು ಒತ್ತಾಯಿಸಿತು. ಸಮಿತಿಯ ವಾದವನ್ನು ಆಲಿಸಿದ ಆಯುಕ್ತರು ಆಡಳಿತ ವರ್ಗದ ಅಭಿಪ್ರಾಯ ಕೇಳಿದರು.

ಈ ಸಂದರ್ಭದಲ್ಲಿ ಆಡಳಿತ ವರ್ಗದ ಪರವಾಗಿ ಸಭೆಗೆ ಆಗಮಿಸಸಿದ್ದ ಕೆಎಸ್‌ಆರ್‌ಟಿಸಿ ನಿಗಮದ ನಿರ್ದೇಶಕರು ( ಸಿ ಮತ್ತು ಜಾ), ಕಾರ್ಮಿಕರ ಬೇಡಿಕೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಲಾಗಿದೆ. ಅಲ್ಲದೆ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಆದ್ದರಿಂದ ಸ್ವಲ್ಪ ಕಾಲಾವಕಾಶ ಬೇಕೆಂದು ಮನವಿ ಮಾಡಿದರು.

ಆಗ ಜಂಟಿ ಕ್ರಿಯಾ ಸಮಿತಿಯು ನಮ್ಮ ಬೇಡಿಕೆಗಳ ಬಗ್ಗೆ ಅಂತಿಮ ತೀರ್ಮಾನವನ್ನು ಆಗಸ್ಟ್‌ 4ರೊಳೆಗೆ ತೆಗೆದುಕೊಳ್ಳಲೇಬೇಕು ಎಂದು ಸ್ಪಷ್ಟವಾಗಿ ತಿಳಿಸಿತು. ಹೀಗಾಗಿ ಆಯುಕ್ತರು ಸಭೆಯನ್ನು ಮತ್ತೆ ಆ.2ರಂದು ಬೆಳಗ್ಗೆ 11 ಗಂಟೆಗೆ ನಿಗದಿಸಿಗೊಳಿಸಿ ಅಂದು ಆಡಳಿತ ವರ್ಗ ಸರ್ಕಾರದ ಸ್ಪಷ್ಟ ತೀರ್ಮಾನವನ್ನು ತಿಳಿಸಬೇಕು ಎಂದು ಸೂಚಿಸಿದರು.

ಇನ್ನು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಸರ್ಕಾರದಿಂದ ನಮ್ಮ ಬೇಡಿಕೆಗಳ ಬಗ್ಗೆ ಸ್ಪಷ್ಟ ತೀರ್ಮಾನ ಬರುವವರಿಗೂ ಮುಷ್ಕರದ ತೀರ್ಮಾನ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 993 ರೂ. ಹೆಚ್ಚಳ- ಭಾರೀ ಏರಿಕೆ ಮೇ 1ರಿಂದಲೇ ಜಾರಿ KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ