NEWSನಮ್ಮರಾಜ್ಯ

ಕೊಳೆತ ತಾಯಿಯ ಮೃತ ದೇಹದೊಂದಿಗೆ ಒಂದು ವಾರ ಕಳೆದ ಮಾನಸಿಕ ಅಸ್ವಸ್ಥೆ

ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ l ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ:  ಅನಾರೋಗ್ಯದಿಂದ ಮೃತಪಟ್ಟಿದ್ದ ನಿವೃತ್ತ ಶಿಕ್ಷಕಿಯ ಶವದ ಜತೆ ಮಾನಸಿಕ ಅಸ್ವಸ್ಥೆ ಮಗಳು  ಒಂದು ವಾರ ಕಳೆದಿರುವ ಹೃದಯ ವಿದ್ರಾವಕ ಘಟನೆ ಇಂದು ತಿಳಿದು ಬಂದಿದೆ.

ನಿವೃತ್ತ ಶಿಕ್ಷಕಿ ರಾಜೇಶ್ವರಿ (65) ಮೃತರು. ನಗರದ ಬಸವೇಶ್ವರ ಜನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ಶಿಕ್ಷಕಿ ರಾಜೇಶ್ವರಿ ಅವರು ಬ್ರೆಸ್ಟ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಇದರಿಂದಲೇ ಕಳೆದ ವಾರ ಮೃತಪಟ್ಟಿರಬಹುದು.  ಆದರೂ ಮನೆಯಲ್ಲಿದ್ದ ಮಗಳು ಅಮ್ಮ ಮಲಗಿದ್ದಾಲೆ ಎಂದು ಅಡುಗೆಯನ್ನು ಮಾಡಿಕೊಂಡು ಊಟ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇವರು ಅಕ್ಕಪಕ್ಕದ ಮನೆಯವರೊಂದಿಗೆ ಹೆಚ್ಚಾಗಿ ಸಂಪರ್ಕ ಹೊಂದಿರಲಿಲ್ಲ. ಕಾರಣ ಮಗಳು ಮಾನಸಿಕ ಅಸ್ವವಸ್ಥೆ ಎಂಬುವುದು. ಇದರಿಂದಲೇ ಅಕ್ಕಪಕ್ಕದ ಮನೆಯವರು. ಇವರ ಬಗ್ಗೆ ಅಷ್ಟಾಗಿ ಗಮನಿಸುತ್ತಿರಲಿಲ್ಲ. ಆದರೆ ಒಂದು ವಾರದ ಹಿಂದೆಯೇ ಶಿಕ್ಷಕಿ ನಿಧನರಾಗಿದ್ದರಿಂದ ಮನೆಯಿಂದ ಕೆಟ್ಟವಾಸನೆ ಬರುತ್ತಿದ್ದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಜನಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ಪೊಲೀಸರು, ಮನೆಯ ಒಳಗಡೆಯಿಂದ ಚಿಲಕ ಹಾಕಿಕೊಂಡಿದ್ದ ಬಾಗಿಲನ್ನು ಮುರಿದು ಒಳಪ್ರವೇಶಿಸಿದ್ದಾರೆ. ಆ ವೇಳೆ ತಾಯಿ ನಿಧನರಾಗಿದ್ದು, ಮಗಳು ಆ ವಾಸನೆಯಲ್ಲೇ ಇದ್ದನ್ನು ನೋಡಿದ್ದಾರೆ. ಬಳಿಕ ಆಕೆಯನ್ನು ವಿಚಾರಿಸಿದಾಗ ಅಮ್ಮ ಮಲಗಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಮಾತನ್ನು ಗಮನಿಸಿದ ಪೊಲೀಸರು ಈಕೆ ಮಾನಸಿಕ ಅಸ್ವಸ್ಥೆ ಎಂಬುದನ್ನು ತಿಳಿದು ಈಗ ಶಿವಮೊಗ್ಗದ ಮಾನಸಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇನ್ನು ಶಿಕ್ಷಕಿಯ ಸಂಬಂಧಿಕರು ಯಾರಿದ್ದಾರೆ ಎಂಬುದರ ಬಗ್ಗೆ ಪೊಲೀಸ್‌ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ತನ್ನ ತಾಯಿ ಒಂದು ವಾರದ ಹಿಂದೆಯೇ ಸಾವನ್ನಪ್ಪಿದ್ದರು ಮಗಳು ಆ ಕೊಳೆತ ಹೆಣದ ಜತೆಯಲ್ಲೇ ಕಾಲಕಳೆದಿರುವುದು ನಿಜಕ್ಕೂ ಹೃದಯ ಕಲಕುವ ಘಟನೆ.ಯೇ. ಇಂಥವರನ್ನು ನೋಡಿಕೊಳ್ಳಲು ತುಂಬ ಹತ್ತಿರದ ಸಂಬಂಧಿಕರು ಇಲ್ಲವೇ ಎಂಬುವುದು ಪೊಲೀಸರನ್ನು ಸದ್ಯ ಕಾಡುತ್ತಿರುವ ಪ್ರಶ್ನೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...