NEWSನಮ್ಮರಾಜ್ಯ

ಕರ್ನಾಟಕದಲ್ಲಿ ಇಂದು ಕೊರೊನಾ ಸ್ಫೋಟ

ಒಂದೇದಿನ ಸೋಂಕಿತರ ಸಂಖ್ಯೆ 127ಕ್ಕೆ ಏರಿಕೆ l ರಾಜ್ಯದಲ್ಲಿ 1373ಕ್ಕೆ ಏರಿದ ಕೋವಿಡ್‌-19

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶ್ವಮಾರಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಇಂದು ಒಂದೇದಿನ ಮೂವರು ಮೃತಪಟ್ಟಿದ್ದು, 127ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆ ಅಗಿದ್ದು, ಸೋಂಕಿತರ ಸಂಖ್ಯೆ 1373ಕ್ಕೆ ತಲುಪಿದೆ.

ಇಂದು ಬೆಂಗಳೂರು, ವಿಜಯಪುರ ಮತ್ತು ಬಳ್ಳಾರಿಯಲ್ಲಿ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಇನ್ನು ಸೋಂಕಿಗೆ ಒಳಗಾದ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಂಡ್ಯದಲ್ಲಿ 62 ಮಂದಿಯಲ್ಲಿ ಪಾಸಿಟಿವ್‌ ಬಂದಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಈವರೆಗೆ 151ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಗಿದೆ. ಇಂದು ಕಂಡು ಬಂದಿರುವ ಸೋಂಕಿತರಲ್ಲಿ 91 ಮಂದಿ ಮುಂಬೈನಿಂದ ಬಂದವರಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇನ್ನು  ದಾವಣಗೆರೆಯಲ್ಲಿ 19, ಶಿವಮೊಗ್ಗ 12, ಕಲಬುರಗಿ 11, ಬೆಂಗಳೂರು 5, ಉಡುಪಿ 4, ಉತ್ತರ ಕನ್ನಡ 4, ಹಾಸನ 3, ಚಿಕ್ಕಮಗಳೂರು 2, ಗದಗ, ಯಾದಗಿರಿ, ವಿಜಯಪುರ ಮತ್ತು ಚಿತ್ರದುರ್ಗ 1 ಪ್ರಕರಣ ಸೇರಿ  ಒಟ್ಟು 127 ಸೋಂಕಿತರು ಇಂದು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1373ಕ್ಕೆ ಏರಿಕೆ ಆಗಿದೆ.

ದೇಶದಲ್ಲಿ 101,261 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 101,261 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,164 ಮಂದಿ ಮೃತಪಟ್ಟಿದ್ದಾರೆ.39,233ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 4,904,566 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 320,326 ಜನರು ಮೃತಪಟ್ಟಿದ್ದಾರೆ. 1,916,024 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್