Please assign a menu to the primary menu location under menu

NEWSನಮ್ಮರಾಜ್ಯ

ಇಂದು ರಾಜ್ಯದಲ್ಲಿ 149 ಕೊರೊನಾ ಪ್ರಕರಣ ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಕ್ಕರೆ ನಾಡು ಮಂಡ್ಯಕ್ಕೆ ಮುಂಬೈ ಕಂಟಕ ಎದುರಾಗಿದ್ದು, ಮಂಗಳವಾರ ಒಂದೇ ಜಿಲ್ಲೆಯಲ್ಲಿ ಬರೋಬ್ಬರಿ 71  ಸೇರಿ ರಾಜ್ಯದಲ್ಲಿ ಒಟ್ಟು 149 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆ ಆಗಿದೆ.

ದಾವಣಗೆರೆಯಲ್ಲಿ 19, ಶಿವಮೊಗ್ಗ 12, ಕಲಬುರಗಿ 13, ಬೆಂಗಳೂರು 12, ಬಾಗಲಕೋಟೆ 5, ಉಡುಪಿ 4, ಉತ್ತರ ಕನ್ನಡ 4, ಹಾಸನ 3, ಚಿಕ್ಕಮಗಳೂರು 5, ಗದಗ, ಯಾದಗಿರಿ, ಬೀದರ್, ವಿಜಯಪುರ ಮತ್ತು ಚಿತ್ರದುರ್ಗದಲ್ಲಿ ತಲಾ 1 ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಒಟ್ಟು 149 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ರಾಜ್ಯದಲ್ಲಿ ಸೋಂಕಿಗೆ ಇಂದು ಮೂವರು ಬಲಿಯಾಗಿದ್ದಾರೆ. ಬಳ್ಳಾರಿಯ 61 ವರ್ಷದ ಮಹಿಳೆ ಅಸುನೀಗಿದ್ದು. ಇವರು ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚಿಗೆ ಹೃದಯ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದರು. ಇನ್ನು ವಿಜಯಪುರದ 65 ವರ್ಷ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. ಇವರನ್ನು ಸೋಮವಾರ ಆಸ್ಪತ್ರೆಗೆ ಕರೆತರುವಾಗಲೇ ಮೃತಪಟ್ಟಿದ್ದರು. ಬೆಂಗಳೂರಿನ ನಿವಾಸಿ 54 ವರ್ಷದ  ವ್ಯಕ್ತಿ ಸೋಮವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40ಕ್ಕೆ ಏರಿಕೆ ಆಗಿದೆ.

1395 ಪ್ರಕರಣಗಳ ಪೈಕಿ 530 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 802 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 101,261 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 101,261 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,164 ಮಂದಿ ಮೃತಪಟ್ಟಿದ್ದಾರೆ.39,233ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 4,904,566 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 320,326 ಜನರು ಮೃತಪಟ್ಟಿದ್ದಾರೆ. 1,916,024 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ