NEWSನಮ್ಮಜಿಲ್ಲೆನಮ್ಮರಾಜ್ಯ

ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ

ವಿಜಯಪಥ ಸಮಗ್ರ ಸುದ್ದಿ
  • ಸಾರಿಗೆ ನೌಕರರ ಹೋರಾಟ  ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ
  • ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ  ಕಾಂಗ್ರೆಸ್‌ ಸರ್ಕಾರ

ಬೆಂಗಳೂರು: ಸಮಾನ ವೇತನ, ವಜಾಗೊಂಡ ನೌಕರರ ಮರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರ ಒಕ್ಕೂಟ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹವನ್ನು ಪೊಲೀಸರ ಬಿಟ್ಟು ಹತ್ತಿಕ್ಕುವ ಮೂಲಕ ನೌಕರರ ವಿರೋಧಿ ನಡೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಅನುಸರಿ ಬಿಜೆಪಿಗಿಂತ ನಾವೇನು ಕಡಿಮೆ ಇಲ್ಲ ಎಂಬ ದರ್ಪವನ್ನು ಮೆರೆದಿದೆ.

ಇಂದು ಬೆಳಗ್ಗೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಆರಂಭಿಸಿತು. ಸಂಜೆ ಆಗುತ್ತಿದಂತೆ ತನ್ನ ಕುತಂತ್ರ ಬುದ್ಧಿಯನ್ನು ತೋರಿಸಿರುವ ಕಾಂಗ್ರೆಸ್‌ ಸರ್ಕಾರ ಪೊಲೀಸರನ್ನು ಬಿಟ್ಟು ಸತ್ಯಾಗ್ರಹ ನಿರತರನ್ನು ಬಂಧಿಸಿ ದೌರ್ಜನ್ಯ ಎಸಗುವ ಮೂಲಕ ನೌಕರರ ನ್ಯಾಯಯುತ ಹೋರಟದ ಹಕ್ಕನ್ನೇ ಕಸಿದುಕೊಂಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ಸಾರಿಗೆ ನೌಕರರು ಎಲ್ಲ ನಾಲ್ಕೂ ನಿಗಮಗಳ ಸಂಘಟನೆಗಳ ಒಕ್ಕೂಟದಡಿಯಲ್ಲಿ ಈ ಧರಣಿ ಸತ್ಯಾಗ್ರಹವನ್ನು ಗಾಂಧಿ ಮಾರ್ಗದಲ್ಲಿ ಮಾಡುತ್ತಿದ್ದರು. ಆದರೆ ಅದನ್ನು ಸಹಿಸದ ಸರ್ಕಾರ ತನ್ನ ನೀಚ ಬುದ್ಧಿಯನ್ನು ಪ್ರದರ್ಶಿಸುವ ಮೂಲಕ ತಾನೇ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆ ಈಡೇರಿಸುವುದಕ್ಕೆ ಮೀನಮೇಷ ಎಣಿಸುತ್ತಿದೆ.

ಹೌದು! ಬಸ್‌ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಸಾರಿಗೆ ಅಧಿಕಾರಿಗಳು ಕೂಡ ಈ ಶಾಂತಿಯುತ ಹೋರಾಟವನ್ನು ಬೆಂಬಲಿಸುವುದಾಗಿ ತಿಳಿಸಿದ್ದರು.  ಇದನ್ನು ಗಮನಿಸಿದ ಸರ್ಕಾರ ಧರಣಿ ಸ್ಥಳಕ್ಕೆ ಬಂದು ಅವರ ಬೇಡಿಕೆ ಈಡೇರಿಸುವುದಕ್ಕೆ ಕ್ರಮ ಜರುಗಿಸುವ ಬದಲು ಆ ಸತ್ಯಾಗ್ರಹ ನಿರತರನ್ನೇ ಬಂಧಿಸುವ ಮೂಲಕ ಕಿಡಿಗೇಡಿತನ ಪ್ರದರ್ಶಿಸಿದೆ.

ಈ ಮೊದಲ ತಿಳಿಸಿರುವಂತೆ ಸಾರಿಗೆ ನೌಕರರಿಗೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ನಾವು ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಸರ್ಕಾರಿ ನೌಕರರಂತೆ ಸರಿಸಮಾನ ವೇತನ ಮಾಡುತ್ತೇವೆ ಎಂದು ಕೊಚ್ಚಿಕೊಂಡಿತ್ತು. ಅದರಂತೆ 7ನೇ ವೇತನ ಆಯೋಗದ ಮಾದರಿಯಲ್ಲಿ 01/01/2024 ರಿಂದ ವೇತನ ಜಾರಿ ಮಾಡಬೇಕು ಎಂಬ ಬೇಡಿಕೆಯೊಂದಿಗೆ ನೌಕರರು ಧರಣಿ ಆರಂಭಿಸಿದ್ದರು.

ಇದರ ಜತೆಗೆ 01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ನೀಡಬೇಕು (ನಿವೃತ್ತ ನೌಕರರಿಗೆ ಮೊದಲ ಅದ್ಯತೆಯಲ್ಲಿ ಅವರ ಹಿಂಬಾಕಿ ಮತ್ತು ಇತರೆ ಸೇವಾ ಆರ್ಥಿಕ ಸೌಲಭ್ಯಗಳನ್ನು ನೀಡುವುದು).

Advertisement

ಇನ್ನು ಪ್ರಮುಖವಾಗಿ 2020 ಮತ್ತು 2021ರ ಸಾರಿಗೆ ಮುಷ್ಕರದ ಸಮಯದಲ್ಲಿ ಆಗಿರುವ ವಜಾ ಮತ್ತು ಇತರೆ ಪ್ರಕರಣಗಳ ಶಿಕ್ಷಾದೇಶಗಳನ್ನು ರದ್ದು ಪಡಿಸಿ ಸೌಹರ್ದ ರೀತಿಯಲ್ಲಿ ಇತ್ಯರ್ಥ ಪಡಿಸುವುದು ಹಾಗೂ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು.

ಇದರ ನಡುವೆ ಸಾರಿಗೆ ಸಂಘಟನೆಗಳ ಮುಖಂಡರು ಅದರಲ್ಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು 1992 ನಂತರ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಯದೆ ಇರುವುದರಿಂದ, ಕೂಡಲೆ” ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಮಾಡಲು ಆದೇಶ ಮಾಡಬೇಕು ಎಂದು ಒತ್ತಾಯಿಸಿದ್ದರು.

ಸೌಜನ್ಯಕ್ಕಾದರು ಅವರ ಬೇಡಿಕೆಗಳನ್ನು ಧರಣಿ ನಿರತರ ಬಳಿ ಬಂದು ಕೇಳದ ಸರ್ಕಾರ ಏಕಾಏಕಿ ಪೊಲೀಸರನ್ನು ಬಿಟ್ಟು ಹೋರಾಟವನ್ನು ಹತ್ತಿಕ್ಕುವ ಮೂಲಕ ಹಿಂದೆ ಇದ್ದ ಬಿಜೆಪಿ ಸರ್ಕಾರಕ್ಕಿಂತಲೂ ಕೀಳಾಗಿ ಇಂದು ನೌಕರರನ್ನು ನಡೆಸಿಕೊಂಡಿದೆ. ಇದು ಪ್ರಜಾಪ್ರಬುತ್ವ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಇಂಥ ಸರ್ಕಾರವನ್ನು ನಾವು ಅಧಿಕಾರಕ್ಕೆ ತಂದಿರುವುಕ್ಕೆ ಭಾರಿ ನೋವಾಗುತ್ತಿದೆ ಎಂದು ನೌಕರರು ಹಿಡಿ ಶಾಪ ಹಾಕುತ್ತಿದ್ದಾರೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರನ್ನು ಸಂಜೆ ಬಂಧಿಸಿದ ಪೊಲೀಸರು ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿ ಬಳಿಕ ಬಿಟ್ಟು ಕಳುಹಿಸಿದ್ದಾರೆ.

ವಿಜಯಪಥ - vijayapatha
Megha
the authorMegha

Leave a Reply

error: Content is protected !!