EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ

ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ & ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ಎನ್ಎಸಿ ಹಾಗು ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತರ ಟ್ರಸ್ಟ್ ವತಿಯಿಂದ ಇದೇ 28ರಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ನಡೆದ ಇಪಿಎಸ್ ಪಿಂಚಣಿದಾರರ 28ನೇ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. + ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ಇಪಿಎಸ್ ನಿವೃತ್ತರಿಗೆ ಹಾಗೂ ಇಪಿಎಸ್ ವ್ಯಾಪ್ತಿಯಲ್ಲಿ ಬರದ ನಿವೃತ್ತರಿಗೆ 5000 ರೂ. ಕೂಡಲೇ ನೀಡಬೇಕೆಂದು ಆಗ್ರಹಿಸಿದರು.
ಇನ್ನು ಅಧಿಕ ಪಿಂಚಣಿಗೆ ಸಂಬಂದಿಸಿದಂತೆಯೂ ಸಹ ಹಲವಾರು ಬಾರಿ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಇದೊಂದು ವ್ಯರ್ತ ಪ್ರಯತ್ನವಾಗಿದ್ದು, ಈ ಅಧಿಕಾರಿಗಳಿಗೆ ನಿವೃತ್ತರ ಬಗ್ಗೆ ಯಾವುದೇ ಕಳಜಿ ಇಲ್ಲ ಎಂದು ಅಧಿಕಾರಿಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು.
ಸಂಘದ ಕಾರ್ಯಾಧ್ಯಕ್ಷ ಶಂಕರ್ ಕುಮಾರ್ ಮಾತನಾಡಿ, ಇಪಿಎಸ್ ನಿವೃತ್ತರು ತೀವ್ರ ಸಂಕಷ್ಟದಲ್ಲಿದ್ದು, ಕಳೆದೊಂದು ದಶಕದಿಂದ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಎನ್ಎಸಿ ಮುಖ್ಯಸ್ಥ ಕಮಾಂಡರ್ ಅಶೋಕ್ ರಾವತ್ ಅವರ ನೇತೃತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಹೋರಾಟ ಮಾಡುತ್ತಿದ್ದರೂ ಸಹ ಇದುವರವಿಗೂ ಯಾವುದೇ ಪ್ರತಿಫಲ ಸಿಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ ಮಾತನಾಡಿ, ಇಪಿಎಫ್ಒ ಅಧಿಕಾರಿಗಳು, ಇಪಿಎಸ್ ನಿವೃತ್ತರು ಅಧಿಕ ಪಿಂಚಣಿಗೆ ಅರ್ಹರಿದ್ದರೂ ಸಹ, ಸಲ್ಲದ ನಿಯಮಗಳನ್ನು ಸೃಷ್ಟಿಸಿಕೊಂಡು, ನಿವೃತ್ತರನ್ನು ನಿರಂತರವಾಗಿ ವಂಚಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಮ್ಮ ತಪ್ಪಿನ ಅರಿವಾಗಿ, ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಅಧಿಕ ಪಿಂಚಣಿ ನೀಡಲೇಬೇಕಾಗುತ್ತದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ ಮಾತನಾಡಿ, ದೇಶಾದ್ಯಂತ ಇರುವ ಎಲ್ಲ 78 ಲಕ್ಷ ನಿವೃತ್ತರು ಸಂಕಷ್ಟದಲ್ಲಿದ್ದು, ಹಿರಿಯ ಚೇತನಗಳಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತಾ, ಒಟ್ಟಾಗಿ ಈ ಆಂದೋಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಪಿಎಸ್ ನಿವೃತ್ತರು ಭಾಗಿಯಾದಲ್ಲಿ, ನಮಗೆ ಜಯ ಶತಸಿದ್ದ ಎಂದು ತಿಳಿಸಿದರು.
ಮೇಲೂರು ಅಮರ್ ಹಾಗೂ ನಾರಾಯಣರಾವ್ ಮಾತನಾಡಿ, ಬೃಹತ್ ಸಂಖ್ಯೆಯಲ್ಲಿ ಇಪಿಎಸ್ ನಿವೃತ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಟ್ರಸ್ಟ್ ಪದಾಧಿಕಾರಿಗಳಾದ ಶ್ರೀನಿವಾಸನಾಯ್ಡು, ಸೂಣ್ಣಪ್ಪ, ಎಂ. ನಾರಾಯಣಸ್ವಾಮಿ, ಹಾಗೂ ಡಿ.ವಿ. ನಾರಾಯಣಸ್ವಾಮಿ ಹಲವಾರು ಮುಖಂಡರು ಇದ್ದರು. ಇನ್ನು ಸಂಘದ ಪದಾಧಿಕಾರಿಗಳಾದ ನಾಗರಾಜು, ರುಕ್ಮೆಶ್ ಹಾಗೂ ಕೃಷ್ಣಮೂರ್ತಿ ಅತ್ಯಂತ ಯಶಸ್ವಿಯಾಗಿ ಸಭೆಯನ್ನು ನಡೆಸಿಕೊಟ್ಟರು.
ಇನ್ನು ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆಯೊಂದಿಗೆ ಮನವಿ ಪತ್ರವನ್ನು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ(minister for labour & employment) ಸಚಿವರಾದ ಮುನ್ಸೂಕ್ ಮಾಂಡವೀಯ ಹಾಗೂ ಶೋಭಾ ಕರಂದ್ಲಾಜೆಯವರಿಗೆ ಈ ದಿನವೇ ಕಳುಹಿಸಿಕೊಡಬೇಕೆಂದು ಅಧಿಕಾರಿಗಳಿಗೆ ನೀಡಲಾಯಿತು. ನಮ್ಮ ಸಂಘದ ಖಜಾಂಚಿ ಡೋಲಪ್ಪನವರು ಎಲ್ಲ ಮುಖಂಡರು ಹಾಗೂ ಪ್ರತಿಭಟನಾಕಾರರನ್ನು ಸ್ವಾಗತಿಸುವ ಮೂಲಕ ಸಭೆಗೆ ಚಾಲನೆ ನೀಡಿದರು.
ಅಂತಿಮವಾಗಿ ಇಪಿಎಫ್ಒ ಅಧಿಕಾರಿಗಳು ನಮ್ಮ ಮನವಿ ಪತ್ರ ಸ್ವೀಕರಿಸಿ ಮಾತನಾಡುತ್ತಾ, ಇಂದಿನ ಸಭೆಯ ಸಂಪೂರ್ಣ ವಿವರಗಳನ್ನು ಕೇಂದ್ರ ಸಚಿವರ ಕಾರ್ಯಾಲಯಕ್ಕೂ ಹಾಗೂ ದೆಹಲಿಯಲ್ಲಿನ ತಮ್ಮ ಮೇಲಧಿಕಾರಿಗಳಿಗೂ ಕಳಿಸಿ ಕೊಡುವುದಾಗಿ ಅಧಿಕಾರಿಗಳು ತಿಳಿಸಿದರು.
Related


You Might Also Like
ಆ.31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕ ಶೇ.1 ರಿಂದ ಶೇ.2ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಆ.31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ...
ಎಂಎಸ್ಪಿ ಬೆಂಬಲ ಬೆಲೆ ಘೋಷಿಸಿ ರೈತರ ಸಂಕಷ್ಟದಿಂದ ಪಾರು ಮಾಡಿ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ಗೆ ಮನವಿ
ಮೈಸೂರು: ಸುತ್ತೂರಿನಿಂದ ವರುಣ ಮೂಲಕ ಮೈಸೂರಿಗೆ ಬರುತ್ತಿದ್ದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ವರುಣ ಬಳಿ ನಿಲ್ಲಿಸಿ ಎಂಎಸ್ಪಿ ಬೆಂಬಲ ಬೆಲೆ ಘೋಷಣೆ...
BMTC ಸಂಸ್ಥೆಯಲ್ಲಿ ಪ್ರಸ್ತುತ 27,595 ನೌಕರರಿಗೆ ಹಲವು ಕಲ್ಯಾಣ ಯೋಜನೆಗಳು ಜಾರಿ: ಎಂಡಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸ್ವತಂತ್ರ ಸಂಸ್ಥೆಯಾಗಿ 27 ವರ್ಷಗಳನ್ನು ಪೂರೈಸಿದ್ದು, ಪ್ರಸ್ತುತ ರಾಷ್ಟ್ರದಲ್ಲಿಯೇ ಒಂದು ಮಾದರಿ ನಗರ ಸಾರಿಗೆ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ ವ್ಯವಸ್ಥಾಪಕ ನಿರ್ದೇಶಕ...
ಯಾವುದೇ ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿಲ್ಲ ನಮ್ಮ ಚಾಲಕನ ಅತಿ ವೇಗ, ಅಜಾಗರೂಕತೆಯೇ ಕಾರಣ: ಯಾವುದೇ ತನಿಖೆ ನಡೆಸದೇ ತಪ್ಪೊಪ್ಪಿಕೊಂಡ KSRTC
ಅದೇ ನಿಮ್ಮ ಮೇಲೆ ಯಾವುದೇ ತನಿಖೆ ಮಾಡದೆ ಈ ರೀತಿ ಆರೋಪ ಹೊರಿಸಿದರೆ ಒಪ್ಪಿಕೊಳ್ಳುತ್ತೀರಾ ಎಂಡಿ ಅಕ್ರಮ್ ಪಾಷ ಅವರೆ? ಬೆಂಗಳೂರು: ತಲಪಾಡಿಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ...
KSRTC: ಕಾರ್ಮಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯುವ ಸಾರಿಗೆ ನೌಕರರ ಸಭೆ ಸ್ನ್ಯಾಕ್ಸ್, ಒಂದು ಕಪ್ಪು ಟೀ ಅಥವಾ ಕಾಫಿಗಷ್ಟೇ ಸೀಮಿತ
ಇಂದು ಜಂಟಿ ಕ್ರಿಯಾ ಸಮಿತಿ- ಸಾರಿಗೆ ಅಧಿಕಾರಿಗಳ ನಡುವೆ ನಡೆದ ರಾಜೀ ಸಂಧಾನ ಸಭೆ ವಿಫಲ ಮತ್ತೆ ಸೆ.26ಕ್ಕೆ ಮುಂದೂಡಿಕೆ ಬೆಂಗಳೂರು: ಕಾರ್ಮಿಕ ಇಲಾಖೆಯ ಆಯುಕ್ತರು ಇಂದು...
ರಾಜಣ್ಣ ಮನೆಯಲ್ಲಿ ಗೌರಿಸುತನ ಸಂಭ್ರಮ – ರಾಜಧಾನಿಯಲ್ಲಿ 2,19,153 ಗಣಪನ ವಿಸರ್ಜನೆ
ಬೆಂಗಳೂರು: ಕುಮಾರಸ್ವಾಮಿ ಬಡಾವಣೆಯ 2ನೇ ಹಂತ 8 ನೇ ಮುಖ್ಯರಸ್ತೆ 12ನೇ ಅಡ್ಡ ರಸ್ತೆಯಲ್ಲಿರುವ ರಾಜಣ್ಣ ಅವರ ಮನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಗಣೇಶ ಮೂರ್ತಿಯನ್ನು...
KKRTC ಬೀದರ್: ಅಧಿಕಾರಿಗಳ ಕಿರುಕುಳಕ್ಕೆ ನೊಂದು ಬಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಚಾಲಕ ರಾಜು
ಬೀದರ್: ಅಧಿಕಾರಿಗಳ ಕಿರುಕುಳದಿಂದ ಮನನೊಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಬೀದರ್ ಘಟಕ-1ರ ಚಾಲಕ ಬಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಘಟಕದಲ್ಲಿ...
KKRTC: ಲಾರಿಗೆ ಡಿಕ್ಕಿ ಹೊಡೆಯುವುದ ತಪ್ಪಿಸಲು ಹೋಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಸ್- ತಪ್ಪಿದ ಭಾರಿ ಅನಾಹುತ
ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಪಾಲಿಸದ ಬೀದರ್ ಘಟಕ-1ರ ಡಿಎಂ ಬೀದರ್: ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
BMTC: ಕರ್ತವ್ಯ ನಿರತ ಚಾಲಕರು ಮೊಬೈಲ್ ಬಳಸಿದರೆ ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಿ- ತನಿಖಾ ಸಿಬ್ಬಂದಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿಗಳು ಮಾರ್ಗದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸಿದರೆ ಅವರ...