ಮೈಸೂರು: ಕೊರೊನಾ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ನಗರ ಪೊಲೀಸ್ ಆಯುಕ್ತರು ನಗರದಲ್ಲಿ ಮೇ 31ರವರೆಗೆ ಸೆಕ್ಸನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮೇ 18ರ ಮಧ್ಯರಾತ್ರಿ 12 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಲ್ಲಾ ರೀತಿಯ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೂ ಈ ನಿಷೇಧಾಜ್ಞೆ ಅನ್ವಯಲಾಗುತ್ತದೆ. ಪ್ರತಿದಿನ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಮಾತ್ರ ವ್ಯಾಪಾರಿ ಮಳಿಗೆ ತೆರೆಯಲು ಆವಕಾಶವಿದ್ದು, ಗ್ರಾಹಕರ ನಡುವೆ 6 ಅಡಿ ಅಂತರವಿರುವಂತೆ ನೋಡಿಕೊಳ್ಳಬೇಕು. ಸಂಜೆ 7 ರಿಂದ ಬೆಳಿಗ್ಗೆ 7 ರ ತನಕ ಯಾರೂ ಕೂಡ ರಸ್ತೆಯಲ್ಲಿ ಓಡಾಡುವಂತಿಲ್ಲ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಲಾಕ್ಡೌನ್ ಅವಧಿಯ ಪ್ರತಿ ಭಾನುವಾರ ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಯಾರೂ ರಸ್ತೆಯಲ್ಲಿ ಓಡಾಡುವಂತಿಲ್ಲ. ಅಲ್ಲದೇ ವೈದ್ಯಕೀಯ ಸೇವೆಯನ್ನು ಹೊರೆತುಪಡಿಸಿ ಬೇರೆ ಎಲ್ಲಾ ಸಂಚಾರ, ವ್ಯಾಪಾರವನ್ನು ನಿಷೇಧಿಸಲಾಗಿದೆ.
ಯಾವುದೇ ಸಾಮಗ್ರಿಗಳನ್ನು ಕೊಳ್ಳಲು ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಇಲ್ಲಾವಾದಲ್ಲಿ ಸಾಮಗ್ರಿಯನ್ನು ಅಂಗಡಿಯವರು ನೀಡಬಾರದು. ಕೆಲಸ ಮಾಡುವ ಸ್ಥಳದಲ್ಲಿ ಕಡ್ಡಾಯವಾಗಿ ಶುಚಿತ್ವ, ಸಾರ್ವಜನಿಕ ಅಂತರ ಕಾಯ್ದುಕೊಳ್ಳಬೇಕು.
ಈ ಸೂಚನೆಯನ್ನು ಪಾಲಿಸದೆ ಇರುವುದು ಕಂಡುಬಂದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail