NEWSಕೃಷಿನಮ್ಮರಾಜ್ಯ

ರೈತ ಮಹಿಳೆಗೆ ಅವಾಚ್ಯ ಶಬ್ದ ಬಳಸಿದ ಕಾನೂನು ಸಚಿವರು

ಕೆರೆ ಒತ್ತುವರಿ ತೆರವುಗೊಳಿಸಿ ಎಂದು ಮಾನವಿ ಮಾಡಿದ್ದಕ್ಕೆ ಕೋಪಗೊಂಡ ಸಚಿವ ಮಾಧುಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಕೆರೆಗಳು ಒತ್ತುವರಿಯಾಗಿವೆ ಅವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಿ ಎಂದು ರೈತ ಮಹಿಳೆ ಮನವಿ ಮಾಡುತ್ತಿದ್ದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವಾಚ್ಯ ಶಬ್ದ ಬಳಕೆ ಮಾಡಿ ಆ ರೈ ಮಹಿಳೆಯನ್ನು  ಪೊಲೀಸರಿಂದ ಹೊರ ದಬ್ಬಿಸಿದ್ದಾರೆ.

ಇಂದು ಕೋಲಾರಕ್ಕೆ ಭೇಟಿ ನೀಡಿದ ಸಚಿವರನ್ನು ರೈತ ಮಹಿಳೆ ಸೇರಿ ಹಲವು ರೈತರು ತಡೆದು ಎಸ್‌. ಅಗ್ರಹಾರ ಕೆರೆ ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಿ ನೀರು ತುಂಬಲು ಅನುಕೂಲ ಮಾಡಿಕೊಟ್ಟರೆ ರೈತರ ಫಸಲಿಗೆ ನೀರು ಸಿಗಲಿದೆ ಎಂದು ಮನವಿ ಮಾಡಿದ್ದಾರೆ. ಜತೆಗೆ ಹಲವು ಬಾರಿ ಮನವಿ ಮಾಡಿದರು ಯಾವ ಸಚಿವರು ಸ್ಪಂದಿಸಿಲ್ಲ ಎಂದು ಹೇಳಿ ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಹೇಳುತ್ತಿದ್ದಂತೆ ಸಚಿವರು ಗರಂ ಆಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಅಲ್ಲದೇ ಈ ವೇಳೆ ಸ್ಥಳದಲ್ಲಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ಮತ್ತು ಮಹಿಳಾ ಪೇದೆ ಜತಗೂಡಿ ಆ ರೈತ ಮಹಿಳೆಯನ್ನು ಹೊರದಬ್ಬಿದ್ದಾರೆ. ಅಲ್ಲದೇ ಅಸಭ್ಯರಂತೆ ವರ್ತಿಸಿರುವುದು ಈಗ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ನಾವು ನಮ್ಮ ಮನೆ ಕೆಲಸ ಮಾಡಿಕೊಡಿ ಎಂದು ಕೇಳುತ್ತಿಲ್ಲ. ಒತ್ತುವರಿಯಾಗಿರುವ ಕೆರೆಯನ್ನು ಒತ್ತುವರಿದಾರರಿಂದ ಮುಕ್ತಗೊಳಿಸಿಕೊಡಿ ಎಂದು ಕೇಳಿದ್ದಕ್ಕೆ ಯಾವಾಗಲು ನೀನು ತರ್ಲೆ ಮಾಡುತ್ತೀಯ ಎಂದು ಪೊಲೀಸಪ್ಪನ್ನು ನಿಂದಿಸಿದ ವಿಡಿಯೋ ಟಿವಿ ಮಾಧ್ಯವೊಂದರಲ್ಲಿ ಬಿತ್ತರವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಅದನ್ನು ನೋಡಿದ ಮತ್ತು ಕೇಳಿದ ಹಲವು ರೈತ ಮುಖಂಡರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಜನರೊಂದಿಗೆ ಅದು ರೈತ ಮಹಿಯ ಜತೆ ನಡೆದುಕೊಂಡ ರೀತಿ . ಒಳ್ಳೆಯದನ್ನು ಮಾಡಬೇಕಾದವರು ಒತ್ತುವರಿದಾರರ ಪರ ನಿಂತಿರುವಂತೆ ಕಾಣುತ್ತಿದೆ ಎಂದು ಕಿಡಿ ಕಾರಿದ್ದಾರೆ. ಅಲ್ಲದೇ ಸಚಿವರ ವರ್ತನೆಯಿಂದ ರೈತರಿಗೆ ಅಪಮಾನವಾಗಿದೆ. ಆದ್ದರಿಂದ ಅವರು ರೈತ ಮಹಿಳೆಯಲ್ಲಿ ಕ್ಷೆಮೆ ಕೇಳಬೇಕು ಇಲ್ಲದಿದ್ದರೆ ಮುಂದಿನ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...