ಹಾಸನ: ಮುಂಬರುವ ನೈಋತ್ಯ ಮುಂಗಾರಿಗೆ ಬೇಕಾದ ಎಲ್ಲಾ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಿ, ಕೃಷಿ ತೋಟಗಾರಿಕೆಗೆ ಬೇಕೆರುವ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಿ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಎಲ್ಲಾ ಜಿಲ್ಲೆಗಳಿಗ ಸೂಚನೆ ನೀಡಿದ್ದಾರೆ
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಅನೇಕ ಹೆಕ್ಟೇರ್ ಪ್ರದೇಶಗಳಷ್ಟು ನಷ್ಟ ಸಂಭವಿಸಿದ್ದು, ರೈತರಿಗೆ ಪರಿಹಾರ ನೀಡಬೇಕಿದೆ. ಹಾಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯಲ್ಲಿ ಚರ್ಚಿಸಿ ಪರಿಹಾರ ನೀಡಲು ವ್ಯವಸ್ಥೆ ಮಾಡಿ ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮುಂಗಾರಿನಲ್ಲಿ ಸಾಕಷ್ಠು ಭಾಗಗಳಲ್ಲಿ ಅತಿವೃಷ್ಟಿಯಿಂದ ಹಾನಿ ಹಾಗೂ ಪ್ರಕೃತಿ ವಿಕೋಪಗಳು ಸಂಭವಿಸಬಹುದಾಗಿದೆ. ಅದನ್ನು ನಿಭಾಹಿಸಲು ವ್ಯವಸ್ಥಿತ ಸನ್ನದತೆ ಅಗತ್ಯವಿದೆ. ಅಗ್ನಿಶಾಮಕ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಯಂತ್ರೋಪಕರಣಗಳು ಹಾಗೂ ಇತರೆ ಸಾಧನ ಸಲಕರಣೆಗಳಿಗೆ ಅಗತ್ಯತೆಗಳಿದ್ದರೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಅಗತ್ಯ ನಿಯಂತ್ರಣಾ ಕ್ರಮಗಳನ್ನು ಮುಂದುವರೆಸುವಂತೆ ಸೂಚಿಸಿದರಲ್ಲದೇ ಈಗಾಗಲೇ ಸೋಂಕಿತರ ಚಿಕಿತ್ಸೆಗೆ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ವರದಿ ಪಡೆದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಮಾತನಾಡಿ ಹಾಸನ ಜಿಲ್ಲೆಗೆ ಹೊರರಾಜ್ಯಗಳಿಂದ ಬರುತ್ತಿರುವವರಲ್ಲೇ ಕೊರೋನಾ ಸೋಂಕು ಪತ್ತೆಯಾಗುತ್ತಿದ್ದು, ಅವರೆಲ್ಲರನ್ನೂ ಐಸೋಲೇಷನ್‍ನಲ್ಲಿ ಇಟ್ಟು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾಧಿಕಾರಿ ಅರ್. ಗಿರೀಶ್ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪವಿಭಾಗಾಧಿಕಾರಿ ಡಾ.ನವೀನ್ ಭಟ್, ಜಂಟಿ ಕೃಷಿ ನಿರ್ದೇಶಕ ಮಧುಸೂದನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ ಜಗದೀಶ್ ಮತ್ತಿತರರು ಇದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail