NEWSನಮ್ಮರಾಜ್ಯ

ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ರೈತಸಂಘದಿಂದ ಪ್ರತಿಭಟನೆ

ಕೋಲಾರದಲ್ಲಿ ಕೆರೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದಿದ್ದಕ್ಕೆ ಗರಂ ಆಗಿದ್ದ ಸಚಿವರ ರಾಜೀನಾಮೆಗೆ ಪಟ್ಟು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಜಿಲ್ಲೆಯ ಸೋಮಾಂಬುದಿ ಅಗ್ರಹಾರ ಕೆರೆ ಒತ್ತುವರಿಯಾಗಿದೆ ಅದನ್ನು ತೆರವು ಗೊಳಿಸಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ ರೈತ ಸಂಘದ ಜಿಲ್ಲಾಧ್ಯಕ್ಷೆ ನಳಿನಿ ಗೌಡ ಅವರನ್ನು ನಿಂದಿಸಿರುವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು  ರೈತಸಂಘದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ಇಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿ ವಿವಿಧೆಡೆ ಪ್ರತಿಭಟನೆ ಮಾಡಿದ ರೈತ ಸಂಘದ ಕಾರ್ಯಕರ್ತರು, ಚಿಕ್ಕಬಳ್ಳಾಪುರ ಅಂಬೇಡ್ಕರ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಚಿವ ಮಾಧುಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕೆ.ಸಿ.ವ್ಯಾಲಿ ನೀರು ಮುಂದಕ್ಕೆ ಹರಿಯದಂತೆ ದುರ್ಬಳಕೆ ಆಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಕೆರೆ ವೀಕ್ಷಣೆ ಮಾಡಲು ಜಿಲ್ಲೆಗೆ ಭೇಟಿ ನೀಡಿದ್ಧ ವೇಳೆ ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವ  ಜೆ.ಸಿ. ಮಾಧುಸ್ವಾಮಿ ಅವರು ನಮ್ಮ ಸಂಘದ ಜಿಲ್ಲಾಧ್ಯಕ್ಷೆ ನಳಿನಿ ಗೌಡ ಅವರೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಹೀಗಾಗ ಅವರು ಸಚಿವ ಸ್ಥಾನದಲ್ಲಿ ಮುಂದುವರಿಯಲು ಅರ್ಹರಲ್ಲ ಆದ್ದರಿಂದ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೆರೆ ಒತ್ತುವರಿಯಾಗಿರುವುದನ್ನು ತೆರವುಗೊಳಿಸಿಕೊಡಿ ಇದರಿಂದ ಕೊನೆ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಕ್ಕೆ, ದೂರು ತೆಗೆದುಕೊಂಡು ಬಂದಿದ್ದೀಯ ನೀನೇನು ಮಾಡುತ್ತೀಯ ಎಂದು ಏಕ ವಚನದಲ್ಲೇ ಮಾತನಾಡಿದ್ದು ಅಲ್ಲದೇ ನಾನು ಕೆಟ್ಟ ಮನುಷ್ಯ ಇನ್ನು ನೋಡಿಲ್ಲ ಎಂದು ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಕಾನೂನು ಸಚಿವರ ನಡೆ ನಿಜಕ್ಕೂ ರೈತರಿಗೆ ಮಾಡಿರುವ ಅವಮಾನ. ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ. ಇಂಥವರು ಸಚಿವ ಸ್ಥಾನದಲ್ಲಿ ಮುಂದುವರಿಯುವುದಕ್ಕೆ ಯೋಗ್ಯತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ನಮ್ಮದು ರೈತರ ಪರ ಸರ್ಕಾರ ಎಂದು ಹೇಳಿಕೊಳ್ಳುವ ಇವರೇ ರೈತರ ಬಗ್ಗೆ ಇಂಥ ಕೆಟ್ಟಪದ ಬಳಕೆ ಮಾಡಿದರೆ ಹೇಗೆ, ಇವರಿಂದ ರೈತರು ಉದ್ಧಾರ ಆಗಬೇಕ? ರೈತ ಬೆಳೆ ಬೆಳೆಯದಿದ್ದರೆ ಇವರು ಸರ್ಕಾರವನ್ನು ಹೇಗೆ ನಡೆಸುತ್ತಾರೆ. ಇಂಥ ಮಂತ್ರಿ ನಮಗೆ ಬೇಡ ರಾಜೀನಾಮೆ ನೀಡಿ ಹೋಗಲಿ ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರೈತಸಂಘದ ನೂರಾರು ಮಂದಿ  ಕಾರ್ಯಕರ್ತರು ಭಾಗವಹಿಸಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್