ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ಸ್ಫೋಟ ಸಂಭವಿಸಿದ್ದು ಮತ್ತೆ ರಾಜ್ಯದಲ್ಲಿ ಸೆಂಚುರಿ ಬಾರಿಸಿದೆ. ಈ ಮೂಲಕ ಗುರುವಾರ 143 ಸೋಂಕು ಪ್ರಕರಣ ಪತ್ತೆಯಾಗಿದ್ದು, ಒಟ್ಟು 1,605 ಜನರು ಸೋಂಕಿಗೆ ಒಳಗಾಗಿದ್ದಾರೆ.
ಗುರುವಾರ ಮಂಡ್ಯದಲ್ಲಿ 33, ಉಡುಪಿಯಲ್ಲಿ 26, ಹಾಸನದಲ್ಲಿ 13, ಬಳ್ಳಾರಿಯಲ್ಲಿ 11, ಬೆಳಗಾವಿಯಲ್ಲಿ 9, ಬೆಂಗಳೂರಿನಲ್ಲಿ7, ಶಿವಮೊಗ್ಗದಲ್ಲಿ 6, ದಕ್ಷಿಣ ಕನ್ನಡದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 3, ವಿಜಯಪುರದಲ್ಲಿ 1, ಬೆಳಗಾವಿಯಲ್ಲಿ 2, ಧಾರವಾಡದಲ್ಲಿ 5, ಮೈಸೂರಿನಲ್ಲಿ 1, ಉತ್ತರ ಕನ್ನಡದಲ್ಲಿ 7, ತುಮಕೂರಿನಲ್ಲಿ 1, ಗದಗ 2, ರಾಯಚೂರಿನಲ್ಲಿ 5, ಕೋಲಾರದಲ್ಲಿ 2 ಪ್ರಕರಣಗಳು ವರದಿಯಾಗಿವೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇವರಲ್ಲಿ ಬಹುತೇಕರು ಮುಂಬೈಗೆ ಪ್ರಯಾಣ ಬೆಳೆಸಿದ ಹಿನ್ನೆಲೆ ಹೊಂದಿದ್ದಾರೆ. ದಕ್ಷಿಣ ಕನ್ನಡಕ್ಕೆ ದುಬೈಯಿಂದ ಆಗಮಿಸಿದವರಿಗೆ ಸೋಂಕು ತಗಲಿದೆ. ಉಳಿದಂತೆ ರಾಯಘಡ, ತಮಿಳುನಾಡು, ತೆಲಂಗಾಣ, ರಾಯಘಡ, ಥಾಣೆ, ಜಾರ್ಖಂಡ್, ಅಜ್ಮೀರ್ ನಿಂದ ಆಗಮಿಸಿದ್ದವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇಲ್ಲಿಯವರೆಗೆ ಒಟ್ಟು 571 ಜನರು ಗುಣಮುಖರಾಗಿದ್ದು, ಒಟ್ಟು 42 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದಲ್ಲಿ 1,12,442 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 1,12,442 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,438 ಮಂದಿ ಮೃತಪಟ್ಟಿದ್ದಾರೆ. 45,422 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 50,92,046 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 3,29,768 ಜನರು ಮೃತಪಟ್ಟಿದ್ದಾರೆ. 20,26,199 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail