NEWSನಮ್ಮಜಿಲ್ಲೆನಮ್ಮರಾಜ್ಯ

ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು ಮಾಡಿ: ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಚ್.ಆ‌ರ್.ಎಂ.ಎಸ್.ತಂತ್ರಾಂಶದಲ್ಲಿ ಆ.4ರಿಂದ ಮುಂದಿನ ಆದೇಶದವರೆಗೆ ಅಧಿಕಾರಿ/ ನೌಕರರ ರಜೆ ಮಂಜೂರಾತಿಯನ್ನು ರದ್ದುಪಡಿಸಬೇಕು ಎಂದು  ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆ.2ರಂದು ಈ ಸಂಬಂಧ ಆದೇಶ ಹೊರಡಿಸಿದ್ದು, ಅದರಲ್ಲಿ ನಿಗಮಗಳ ಕಾರ್ಮಿಕ ಸಂಘಟನೆಗಳು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದೆಂದು ಆದೇಶಿಸಿದ್ದಾರೆ.

ಆದ್ದರಿಂದ, ಎಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಅಧಿಕಾರಿ/ ನೌಕರರು ರಜೆ ಪಡೆಯುವ ಅವಕಾಶವನ್ನು (Auto approval) ಆ.4ರಿಂದ ಮುಂದಿನ ಆದೇಶವರೆಗೆ ತಡೆಹಿಡಿಯಲಾಗಿದೆ.

ಮುಂದುವರಿದು, ಉಲ್ಲೇಖ-1ರ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ವಾರದ ರಜೆ ಮತ್ತು ದೀರ್ಘಾವಧಿ ರಜೆಯಲ್ಲಿರುವ ನೌಕರರನ್ನು ಹೊರತುಪಡಿಸಿ ಎಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಈಗಾಗಲೇ ಅಧಿಕಾರಿ/ ನೌಕರರು ರಜೆ ಪಡೆದಿರುವುದನ್ನು ಆ.4ರಿಂದ ಮುಂದಿನ ಆದೇಶದವರೆಗೆ ರದ್ದುಪಸಲು ಕ್ರಮ ಕೈಗೊಳ್ಳುವಂತೆ ತಿಳಿಸಲು ಸೂಕ್ತಾಧಿಕಾರಿಗಳಿಂದ ನಿರ್ದೇಶಿಸಲ್ಪಟ್ಟಿರುತ್ತೇನೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Megha
the authorMegha

Leave a Reply

error: Content is protected !!
Latest news
2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ ಜೂನ್, 21ರಂದು ವಿಶ್ವ ಯೋಗ ದಿನ ಆಚರಿಸೋಣ ಬನ್ನಿ ಡಿಸಿ ಡಾ.ಅನುರಾಧ ಕರೆ ಇ-ಖಾತಾ ತಿದ್ದುಪಡಿ ಜವಾಬ್ದಾರಿ ಉಪ ಆಯುಕ್ತರಿಗೆ ಕೊಡಿ: ಮಹೇಶ್ವರ್ ರಾವ್