NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು ಆ.5ರಿಂದ ಹಮ್ಮಿಕೊಂಡಿರುವ ಮುಷ್ಕರ ಪ್ರಶ್ನಿಸಿ ಹೈಕೋರ್ಟ್‌ಗೆ PIL ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳಯಿಂದ (ಆ.5) ಹಮ್ಮಿಕೊಂಡಿರುವ ಮುಷ್ಕರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ.

ಬೆಂಗಳೂರಿನ ನಿವಾಸಿ ಜೆ.ಸುನೀಲ್ ಮತ್ತಿತರರು ಪಿಐಎಲ್ ಸಲ್ಲಿಕೆ ಮಾಡಿದ್ದು, ಮುಷ್ಕರ ನಡೆಸುವುದರಿಂದ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತಗೊಳ್ಳಲಿದೆ. ಇದರಿಂದ ನಾಗರಿಕರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತದೆ. ಹೀಗಾಗಿ ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಅಲ್ಲದೆ ನೌಕರರ ಬೇಡಿಕೆಯನ್ನು ಸರ್ಕಾರ ಕೂಡಲೇ ಈಡೇರಿಸುವ ಮೂಲಕ ನಾಗರಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದು, ಇಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್‌ಗಳು ರಸ್ತೆಗಿಳಿಯುವುದು ಅನುಮಾನ ಎನ್ನಲಾಗಿದ್ದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ.

ಈ ಸಭೆಯಲ್ಲಿ ಆ 5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ನಿರ್ಧಾರವಾಗಲಿದೆ ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಂದು ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ಹೂಡುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!