ಬೆಂಗಳೂರು: ರಾಜ್ಯ ಸರ್ಕಾರವು ಕೋವಿಡ್ 19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಲಾಕ್ಡೌನ್ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದ್ದು ಇವುಗಳು ರಾಜ್ಯಾದ್ಯಂತ ಮೇ 18 ರಿಂದ 31 ರವರೆಗೆ ಜಾರಿಯಲ್ಲಿವೆ. ಈ ಆದೇಶದ ಮಾರ್ಗಸೂಚಿ ಕ್ರಮ ಸಂಖ್ಯೆ 6 ರಲ್ಲಿ ಭಾನುವಾರ ಸಂಪೂರ್ಣ ಲಾಕ್ಡೌನ್ ವಿಧಿಸಲಾಗಿದೆ.
ಪ್ರತಿದಿನ ರಾತ್ರಿ 7 ರಿಂದ ಬೆಳಗ್ಗೆ 7 ರವರೆಗೆ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಭಾನುವಾರದಂದು ಹೆಚ್ಚುವರಿಯಾಗಿ ಬೆಳಗ್ಗೆ 7 ರಿಂದ ಸಂಜೆ ರವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರನ್ನು ನಿಷೇಧಿಸಿದೆ (ಭಾನುವಾರದಂದು ಪೂರ್ಣ ದಿನದ ಲಾಕ್ಡೌನ್ ಇರುತ್ತದೆ) ಈ ಉದ್ದೇಶಕ್ಕಾಗಿ ಸಿಆರ್ಪಿಸಿ ಸೆಕ್ಷನ್ 144 ರಡಿಯಲ್ಲಿ ನಿಷೇಧಾತ್ಮಕ ಆದೇಶ (ಕಫ್ರ್ಯೂ)ವನ್ನು ಸ್ಥಳೀಯ ಪ್ರಾಧಿಕಾರಗಳ ವತಿಯಿಂದ ಆದೇಶಿಸಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail
ಸಾರ್ವಜನಿಕರು ಭಾನುವಾರದಂದು ಪೂರ್ಣದಿನದ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳನ್ನು ನಡೆಸಲು ಸ್ಪಷ್ಟೀಕರಣ/ಅನುಮತಿ ನೀಡುವಂತೆ ಕೋರಿದ್ದು, ಆದೇಶದಲ್ಲಿ ಭಾನುವಾರ ಲಾಕ್ಡೌನ್ ಎಂದು ಆದೇಶಿಸಲಾಗಿದೆ.
ಆದರೆ ಮದುವೆ ಸಮಾರಂಭಗಳು ಈ ಹಿಂದೆಯೇ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಂಡು ಗರಿಷ್ಠ ಅತಿಥಿಗಳ ಸಂಖ್ಯೆಯನ್ನು 50 ಕ್ಕೆ ಸೀಮಿತಗೊಳಿಸಿ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಸರಳವಾಗಿ ಮದುವೆ ಸಮಾರಂಭವನ್ನು ನಡೆಸಲು ಅನುಮತಿಸಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail