CrimeNEWSನಮ್ಮರಾಜ್ಯ

ಬಲವಂತವಾಗಿ ಸಾಲ, ಬಡ್ಡಿ ವಸೂಲಿ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ

ಮೈಕ್ರೋಫೈನಾನ್ಸ್ ಸಂಸ್ಥೆ, ಬ್ಯಾಂಕ್‌ಗಳಿಗೆ ಚಾಮರಾಜನಗರ ಡಿಸಿ ಡಾ. ರವಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕೋವಿಡ್-19 ಕಾರಣದಿಂದ ಲಾಕ್‍ಡೌನ್ ಇರುವ ಹಿನ್ನೆಲೆಯಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು, ಬ್ಯಾಂಕ್‌ಗಳು, ಸಹಕಾರಿ ಬ್ಯಾಂಕ್‌ಗಳು ಗ್ರಾಹಕರಿಂದ ಬಲವಂತವಾಗಿ ಯಾವುದೇ ಸಾಲ, ಬಡ್ಡಿ ವಸೂಲಾತಿ ಮಾಡುವ ಪ್ರಕ್ರಿಯೆ ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ  ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಿದ್ದ ಮೈಕ್ರೋಫೈನಾನ್ಸ್, ಬ್ಯಾಂಕ್‌ಗಳು ಹಾಗೂ ಸಹಕಾರಿ ಬ್ಯಾಂಕ್‌ಗಳ ಅಧಿಕಾರಿಗಳು ಮತ್ತು ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಪ್ರಸ್ತುತ ಲಾಕ್‍ಡೌನ್ ಇರುವ ಹಿನ್ನಲೆಯಲ್ಲಿ ಜನರಿಗೆ ಹಲವು ತೊಂದರೆಗಳಿವೆ. ಆದಾಯ, ಉದ್ಯೋಗ ಏರುಪೇರಿನಿಂದಾಗಿ ಸದ್ಯದಲ್ಲಿ ಕೆಲವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲ, ಬಡ್ಡಿ ನೀಡುವಂತೆ ಗ್ರಾಹಕರನ್ನು ಒತ್ತಾಯ ಮಾಡುವಂತಿಲ್ಲ. ಜೂನ್ 31ರವರೆಗೂ ಯಾವುದೇ ಕಾರಣಕ್ಕೂ ಗ್ರಾಹಕರಿಂದ ಸಾಲ ಹಾಗೂ ಬಡ್ಡಿ ಹಣವನ್ನು ಪಡೆಯಬಾರದು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಮೈಕ್ರೋಫೈನಾನ್ಸ್‍ಗಳು ಪ್ರಸಕ್ತ ಸನ್ನಿವೇಶದಲ್ಲಿ ಗ್ರಾಹಕರಿಗೆ ಸದಸ್ಯರಿಗೆ ಹೇಗೆ ನೆರವಾಗಬೇಕೆಂಬ ಉದ್ದೇಶದಿಂದ ಸರ್ಕಾರ ಸಾಕಷ್ಟು ನಿರ್ದೇಶನ, ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ಅನುಸಾರ ನಡೆದುಕೊಳ್ಳಬೇಕು. ಆದರೆ ಗ್ರಾಹಕರಿಗೆ ಒತ್ತಾಯಪೂರ್ವಕವಾಗಿ ಸಾಲ, ಬಡ್ಡಿ ಇನ್ನಿತರ ಹಣವನ್ನು ಪಾವತಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇಂತಹ ಸಮಸ್ಯೆಗಳು ಮತ್ತೆ ಕೇಳಿಬಂದರೆ ಸಹಿಸಲಾಗುವುದಿಲ್ಲ. ಜಿಲ್ಲಾಡಳಿತ ಗಂಭೀರ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ  ತಿಳಿಸಿದರು.

ಸ್ವಸಹಾಯ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳು ಬ್ಯಾಂಕುಗಳು ಸಾಲ ನೀಡುವಂತೆ ಗ್ರಾಹಕರಿಗೆ ನೋಟಿಸ್  ನೀಡಬಾರದು. ಸಹಕಾರಿ ಬ್ಯಾಂಕುಗಳು ಸಹ ಯಾವುದೇ ಕಾರಣಕ್ಕೂ ನೋಟಿಸ್ ಕೊಡಬಾರದು. ಇನ್ನುಮುಂದೆ ನೋಟಿಸ್ ನೀಡುವುದು ಗಮನಕ್ಕೆ ಬಂದರೇ ತಕ್ಷಣವೇ ಸಂಬಂಧಪಟ್ಟ ಬ್ಯಾಂಕು, ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ. ಗ್ರಾಹಕರನ್ನು ಶೋಷಿಸುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...