NEWSನಮ್ಮರಾಜ್ಯಶಿಕ್ಷಣ-

ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು

ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಬಿಎಸ್‌ವೈ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಪರಿಸ್ಥಿತಿ ಉತ್ತಮ ಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿಶೇಷ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಂತರದ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಯಾವುದೇ ಪ್ರದೇಶದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಸಾಧನವಾಗಿರುವುದರಿಂದ ಕಲ್ಯಾಣ ಕರ್ನಾಟಕದ ಅಲ್ಲಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಬೋಧನಾ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕೆಂದು ಸಲಹೆ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಶಿಕ್ಷಣ ಇಲಾಖೆ ಕೈಗೊಂಡಿರುವ ಹಲವು ವಿಶಿಷ್ಟ ಉಪಕ್ರಮಗಳನ್ನು ವಿವರಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್, ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೊರತೆಯಿರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ವಿಶೇಷ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.

ಕಳೆದ ಮೂರು ತಿಂಗಳ ಅವಧಿಯಲ್ಲಿ ಕೋವಿಡ್ ನಂತರದ ಶಿಪರಿಸ್ಥಿತಿಯನ್ನು ಸರ್ವ ಸನ್ನದ್ಧವಾಗಿ ಎದುರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಣ ಇಲಾಖೆ ಹಲವು ಶಿಕ್ಷಣ ಸ್ನೇಹಿ, ವಿದ್ಯಾರ್ಥಿ ಸ್ನೇಹಿಯಾದ ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ವಿವರಿಸಿದ ಸಚಿವರು, ಕೋವಿಡ್‍ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆಯಿರುವ ಹಿನ್ನೆಲೆಯಲ್ಲಿ, ಕಡಿತವಾಗಬಹುದದಾದ ದಿನಗಳಿಗನುಗುಣವಾಗಿ ಪ್ರತಿ ತರಗತಿಗಳ ಪಠ್ಯಕಡಿತಕ್ಕೆ ತಜ್ಞರ ಸಮಿತಿ ವರದಿ ಆಧಾರದಲ್ಲಿ ಇಲಾಖೆ ಕ್ರಮ ವಹಿಸುತ್ತಿದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಎಲ್ಲ ವಯೋಮಾನದ ವಿದ್ಯಾರ್ಥಿಗಳಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ಪಠ್ಯವನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳವಾಣಿ ಯೂ-ಟ್ಯೂಬ್‍ಚಾನೆಲ್ ಮೂಲಕ ಮಕ್ಕಳ ಮನೋರಂಜನಾ ಕಲಿಕೆಗೆ ಒತ್ತು ನೀಡಲಾಗಿದೆ. ಶಿಕ್ಷಣಕ್ಕಾಗಿಯೇ ಪ್ರತ್ಯೇಕ ಚಾನೆಲ್ ಪ್ರಾರಂಭಿಸಲಾಗುತ್ತಿದೆ ಎಂದರು.

ಎಸ್ಸೆಸ್ಸೆಲ್ಸಿ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ನಡೆಸಲಾಗುತ್ತಿದೆ, ಡಿಜಿಟಲ್ ಗ್ರಂಥಾಲಯಗಳು, ಸಾರ್ವಜನಿಕ ಗ್ರಂಥಾಲಯಆಪ್‍ನ್ನು ಲೋಕಾರ್ಪಣೆಗೊಳಿಸಲಾಗಿದೆ. ಒಟ್ಟಾರೆಯಾಗಿ ಕಲಿಕಾ ಕಾಯಿದೆಯ ಅವಕಾಶಗಳಲ್ಲಿ ನಿರಂತರ ಕಲಿಕಾ ಮೌಲ್ಯಮಾಪನದ ಆಶಯವನ್ನು ಸಮಗ್ರವಾಗಿ ಅನುಷ್ಠಾನಗೊಳಿಸುವಲ್ಲಿ ಇಂದಿನ ಪರಿಸ್ಥಿತಿಯನ್ನು ಸದ್ಬಳಕೆ ಮಾಡಿಕೊಳ್ಳಲು ಅವಶ್ಯಕವಿರುವ ಎಲ್ಲ ಉಪಕ್ರಮಗಳನ್ನುಶಿಕ್ಷಣ ಇಲಾಖೆ ಜಾರಿ ಮಾಡಿದೆಎಂದು ಸುರೇಶ್‍ಕುಮಾರ್ ಹೇಳಿದರು.

ಕರ್ನಾಟಕ ಶಿಕ್ಷಣ ನೀತಿ
ವಲಸೆ ಬಂದ ಹಾಗೂ ಮನೆ ತೊರೆದು ಬಂದ ಮಕ್ಕಳಿಗೆ ಶಿಕ್ಷಣ ಕಾಯ್ದೆಯಡಿಯಲ್ಲಿ ವಿಶೇಷನೀತಿ ನಿರೂಪಣೆಗೆ ಇಲಾಖೆ ಈಗಾಗಲೇ ಕ್ರಮ ವಹಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ಥಳೀಯ ಸಾಮಾಜಿಕ ಮತ್ತು ಸಾಂಸ್ಕøತಿಕ ಅಗತ್ಯಗಳಿಗೆ ಒಗ್ಗುವ ರೀತಿಯಲ್ಲಿ ಕರ್ನಾಟಕರಾಜ್ಯ ಶಿಕ್ಷಣ ನೀತಿಯನ್ನು ರೂಪಿಸುವ ಕುರಿತಂತೆ ಶಿಕ್ಷಣಇಲಾಖೆ ಈಗಾಗಲೇ ತಜ್ಞರ ಸಮಿತಿ ರಚಿಸಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಶಿಕ್ಷಣ ನೀತಿ ಹೊರತರಲಾಗುವುದು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್