ಬೆಂಗಳೂರು: ಕೊರೊನಾ ಭೀತಿಯಿಂದ ಇಲ್ಲಿಯವರೆಗೂ ಕುಟುಂತ್ತ ಸಾಗಿದ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಒಟ್ಟು 54 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದ್ದೆದು, ಜೂನ್ ಅಂತ್ಯದ ವೇಳೆಗೆ ಮೌಲ್ಯಮಾಪನ ಕೊನೆಗೊಳ್ಳುವ ನಿರೀಕ್ಷೆ ಇದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದ 8 ಕೇಂದ್ರಗಳಲ್ಲಿ ಈಗಾಗಲೇ ಅರ್ಥಶಾಸ್ತ್ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಉತ್ತರ ಪತ್ರಿಕೆಗಳ ಕುರಿತಂತೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಬಿರಾಧಿಕಾರಿಗಳಿಗೆ ಕೋಡಿಂಗ್ ವ್ಯವಸ್ಥೆ ಮಾಡಲಾಗಿದೆ.