ರಾಮನಗರ: ಗೊಂಬೆ ತಯಾರಿಕೆಯಲ್ಲಿ ವಿಶ್ವವಿಖ್ಯಾತಿ ಪಡೆದಿರುವ ಜಿಲ್ಲೆಯಲ್ಲಿ ಕೊರೊನಾ ಭೀತಿ ಹಿನ್ನೆಲೆ ಗೊಂಬೆಗಳ ಮಾರಾಟ ಮಾಡಲುಸಾಧ್ಯವಾಗದೆ ಇಂದು ಗೊಂಬೆ ತಯಾರಿಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.
ಅದನ್ನು ಮನಗಂಡ ಮಾಜಿ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಂಕಷ್ಟದಲ್ಲಿ ಸಿಲುಕಿರುವ ಕರಕುಶಲಕರ್ಮಿಗಳಿಗೆ ತಾತ್ಕಾಲಿಕವಾಗಿ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.
ಚನ್ನಪಟ್ಟಣ ಶಾಸಕರೂ ಆದ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೂಡಲೆ ಸ್ಪಂದಿಸಿ ಕರಕುಶಲಕರ್ಮಿಗಳ ಹಸಿವನ್ನು ನೀಗಿಸಬೇಕು ಎಂದು ಮನವಿ ಮಾಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ವಿಶ್ವದಲ್ಲೇ ಪ್ರಸಿದ್ಧಿ ಪಡೆದಿರುವ ಚನ್ನಪಟ್ಟಣದ ಗೊಂಬೆಗಳು ಕಳೆದ ಎರಡು ತಿಂಗಳಿಂದ ಮಾರಾಟವಾಗುತ್ತಿಲ್ಲ, ಇದರಿಂದ ತಯಾರಾದ ಗೊಂಬೆಗಳು ಹೊರರಾಜ್ಯಗಳಿಗೆ ಸಾಗಿಸಲು ಸಾಧ್ಯವಾಗದೆ ಉಳಿದಿವೆ. ಹೀಗಾಗಿ ಚನ್ನಪಟ್ಟಣದಲ್ಲಿ 500ಕ್ಕೂ ಹೆಚ್ಚು ಗೊಂಬೆ ತಯಾರಿಕಾ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಸಾವಿರಕ್ಕೂ ಹೆಚ್ಚು ಜನರ ಬದುಕು ದುಸ್ತರವಾಗಿದೆ ಎಂದು ತಿಳಿಸಿದ್ದಾರೆ.
ಗೊಂಬೆ ತಯಾರಕರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಇದೆಲ್ಲವನ್ನು ಗಮನಿಸಿ ಸೂಕ್ತ ಕ್ರಮವಹಿಸಬೇಕು. ಈ ಮೂಲಕ ಭಾರತ ದೇಶದ ಹಿರಿಮೆಯನ್ನು ಎತ್ತಿಹಿಡಿಯುತ್ತಿರುವ ಚನ್ನಪಟ್ಟಣ ಗೊಂಬೆಗಳ ತಯಾರಿಕಾ ಕರಕುಶಲಕರ್ಮಿಗಳಿಗೆ ನೆರವಾಗಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail