ಬೆಂಗಳೂರು: ಇಂದು ಮಧ್ಯಾಹ್ನದ ವರದಿಯಲ್ಲಿ 196 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿತ್ತು. ಆದರೆ ಸಂಜೆ ವೇಳೆಗೆ ಮತ್ತೆ 20 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಇಂದು ಒಂದೇ ದಿನ 216 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ.
ಯಾದಗಿರಿ ಜಿಲ್ಲೆಯೊಂದರಲ್ಲೇ 72 ಪ್ರಕರಣಗಳು ಪತ್ತೆಯಾಗಿವೆ. ಗದಗದಲ್ಲಿ 15 ಮಂದಿಗೆ ಸೋಂಕು ತಗುಲಿದೆ, ರಾಯಚೂರಿನಲ್ಲಿ 40, ಚಿಕ್ಕಬಳ್ಳಾಪುರದಲ್ಲಿ 26, ಮಂಡ್ಯದಲ್ಲಿ 28, ಬೆಂಗಳೂರಿನಲ್ಲಿ 4, ಕಲಬುರಗಿಯಲ್ಲಿ 1, ಬೆಳಗಾವಿಯಲ್ಲಿ 1, ದಾವಣಗೆರೆಯಲ್ಲಿ 3, ಯಾದಗಿರಿಯಲ್ಲಿ 72, ಗದಗದಲ್ಲಿ 15, ಉತ್ತರ ಕನ್ನಡದಲ್ಲಿ 2, ಹಾಸನದಲ್ಲಿ 4, ಬೀದರ್ ನಲ್ಲಿ 3, ದಕ್ಷಿಣ ಕನ್ನಡದಲ್ಲಿ 3, ಧಾರವಾಡದಲ್ಲಿ 5, ಬಳ್ಳಾರಿಯಲ್ಲಿ 3, ಕೋಲಾರದಲ್ಲಿ 3 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 200ಕ್ಕೂ ಹೆಚ್ಚು ಸೋಂಕಿತರಿಗೆ ಮುಂಬೈ ನಂಟಿದೆ. ರಾಜ್ಯದಲ್ಲಿ ಒಟ್ಟಾರೆ 598 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಮಹಾಮಾರಿಗೆ 42 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದಲ್ಲಿ 125,149 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 125,149 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,728ಮಂದಿ ಮೃತಪಟ್ಟಿದ್ದಾರೆ. 51,824 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,318,050 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 340,230 ಜನರು ಮೃತಪಟ್ಟಿದ್ದಾರೆ2,169,139 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail