ಧಾರವಾಡ: ಕೊರೊನಾ ಸೋಂಕನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾಗಿರುವ , ದಿನನಿತ್ಯ ಪ್ಲಾಸ್ಟಿಕ್ ಆಯ್ದು ಜೀವನ ಸಾಗಿಸುತ್ತಿರುವ 450 ಕುಟುಂಬಗಳಿಗೆ ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಮುಂತಾದ ಕಿರಾಣಿ ವಸ್ತುಗಳನ್ನು ವಿತರಿಸಲಾಯಿತು.
ಬೆಳಗಾವಿಯ ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಷನ್ ಇಂಡಿಯಾ, ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ಧಾರವಾಡ ಗ್ರಾಮೀಣ ವಿಕಾಸ ಫೌಂಡೇಷನ್ ಸಂಯುಕಾಶ್ರಯದಲ್ಲಿ ಧಾರವಾಡ ಮತ್ತು ಹುಬ್ಬಳ್ಳಿ ನಗರದ ಕೊಳಚೆ ಪ್ರದೇಶದ ಪ್ಲಾಸ್ಟಿಕ್ ಆಯುವ ಕುಟುಂಬಗಳಿಗೆ ಉಚಿತ ಆಹಾರ ಸಾಮಗ್ರಿ ಕಿಟ್ ಕೊಡಲಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಶಾಸಕ ಅರವಿಂದ ಬೆಲ್ಲದ ಮಾತನಾಡಿ , ನಿಮ್ಮ ಕುಟುಂಬದ ರಕ್ಷಣೆಗಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸೋಪು ಉಪಯೋಗಿಸಬೇಕು ಮತ್ತು ಕೈಗಳನ್ನು ತೊಳೆದುಕೊಳ್ಳಬೇಕು, ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಿ ಕುಟುಂಬದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಈ ಜನರಿಗೆ ಸಲಹೆ ನೀಡಿದರು.
ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನ ಇಂಡಿಯಾ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿಯ ಕಾರ್ಯ ಶ್ಲಾಘನೀಯ ಎಂದರು.ವಕೀಲರು ಮತ್ತು ಅಸಿಸ್ಟಂಟ್ ಸಾಲಿಸಿಟರ್ ಜನರಲ್ ಜೋಶಿ, ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಹೀನಾ ಖಾನ್, ಮಹಿಳಾ ಕಲ್ಯಾಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರಾವಣಿ ಪವಾರ, ಜಗದೀಶ ನಾಯಕ್, ಗಿರೀಶ ಮತ್ತಿಕೊಪ್ಪ, ಮಲ್ಲಪ್ಪ ಮಾನಗಾಂವಿ, ಬಸವರಾಜ ಯಲಿಬಳ್ಳಿ ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail