Breaking NewsNEWSನಮ್ಮಜಿಲ್ಲೆ

ಬಹು ಕೋಟಿ ರೂ.ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿಗೆ ಪ್ರೀತಂ ಜೆ.ಗೌಡ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಬಹು ಕೋಟಿ ರೂಪಾಯಿ ವೆಚ್ಚದಲ್ಲಿ ಹಾಸನ‌ ನಗರವನ್ನು ಹೊರ ವಲಯದೊಂದಿಗೆ ಸಂಪರ್ಕಿಸುವ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ  ಪ್ರೀತಂ ಗೌಡ  ಇಂದು ಚಾಲನೆ‌‌ ನೀಡಿದರು.

ಸುಮಾರು 2.5 ಕೋಟಿ ರೂ ವೆಚ್ಚದಲ್ಲಿ ಗೊರೂರು ರಸ್ತೆಗೆ ಹೊಂದಿಕೊಂಡಿರುವ ದೇವೇಗೌಡ ನಗರ ಮಾರ್ಗವಾಗಿ ಕೃಷ್ಣಾನಗರ ತಲುಪುವ ರಸ್ತೆ ಹಾಗೂ 2 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜಘಟ್ಟದಿಂದ ಗವೇನಹಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ ಬೈಪಾಸ್‍ಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯವರು ಸುಮಾರು 45 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಆ ಅನುದಾನದಲ್ಲಿ ಇಂದು ಲೋಕೋಪಯೋಗಿ ಇಲಾಖೆ ಮುಖಾಂತರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ನಗರದ ಸಮೀಪದಲ್ಲೇ ಇರುವ ಗವೇನಹಳ್ಳಿ, ದೇವೇಗೌಡನಗರ, ಕೃಷ್ಣಾನಗರ, ತಟ್ಟೇಕೆರೆ ಹಾಗೂ ಇತರೆ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಹಾಳಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ನಗರಸಭೆ, ಲೋಕೋಪಯೋಗಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ಒಟ್ಟು ನೂರು ಕೋಟಿ ರೂಪಾಯಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ದಿನೇದಿನೆ ಕೋವಿಡ್-19 ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕರು ಹೆಚ್ಚು ಜಾಗ್ರತೆ ವಹಿಸಬೇಕು. ವಿನಾಕಾರಣ ಹೊರಗಡೆ ಓಡಾಡಬಾರದು ಎಂದು ಮನವಿ ಮಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ