NEWSನಮ್ಮರಾಜ್ಯ

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸ್ಟಾರ್ ಏರ್ ವಿಮಾನ

ಲಾಕ್ ಡೌನ್‍ನಿಂದ ಸ್ಥಗಿತಗೊಂಡಿದ್ದ ವಿಮಾನಯಾನ ಸಂಚಾರ ಪುನರಾರಂಭ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ:  ಲಾಕ್ ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನ ಸಂಚಾರ ಪುನರಾರಂಭಗೊಂಡಿದ್ದು, ಸೋಮವಾರ ಬೆಂಗಳೂರಿನಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನವು ಲಾಕ್ ಡೌನ್ ನಂತರ ಪ್ರಥಮ ಬಾರಿಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೂ ಸ್ಪರ್ಶ ಮಾಡಿತು.

ಬೆಳಗ್ಗೆ 8.40 ರಲ್ಲಿ 25 ಜನ ಯಾತ್ರಿಕರನ್ನು ಕರೆದುಕೊಂಡು ಹೊರಟ ವಿಮಾನ 9.30 ಗಂಟೆಗೆ ಕಲಬುರಗಿ ನೆಲದಲ್ಲಿ ಲ್ಯಾಂಡ್ ಮಾಡಿತು. ತದನಂತರ 10.20ಗೆ ಇಲ್ಲಿಂದ 20 ಪ್ರಯಾಣಿಕರನ್ನು ಕರೆದುಕೊಂಡು ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ದೇಶಿಯ ವಿಮಾನಯಾನ ಸೇವೆಗೆ ಕೆಲ ದಿನಗಳ ಹಿಂದೆ ವಿಮಾನಯಾನ ಸಚಿವಾಲಯ ಹಸಿರು ನಿಶಾನೆ ತೋರಿದ ಪರಿಣಾಮ ಸೋಮವಾರದಿಂದ (ಮೇ-25) ದೇಶದಾದ್ಯಂತ ಕೊರೋನಾ ಹರಡದಂತೆ ಸುರಕ್ಷತಾ ಕ್ರಮದೊಂದಿಗೆ ವಿಮಾನಯಾನ ಸಂಚಾರವು ಆರಂಭಗೊಂಡಿದೆ.

ಭಾರತೀಯ ವಿಮಾನಯಾನ ಪ್ರಾಧಿಕಾರದ ಮಾರ್ಗಸೂಚಿಯಂತೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೋಗುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಪ್ರತಿ ಪ್ರಯಾಣಿಕನಿಂದ ಅರೋಗ್ಯದ ಬಗ್ಗೆ ಸ್ವಯಂ ದೃಢೀಕರಣ ಪಡೆದುಕೊಳ್ಳಲಾಗುತ್ತಿದೆ. ಆರೋಗ್ಯ ಸೇತು ಆ್ಯಪ್ ಪ್ರದರ್ಶಿಸುವುದು ಕಡ್ಡಾಯವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಪ್ರಯಾಣಿಕರ ಲಗೇಜ್‍ಗಳನ್ನು ಡಿಸಿನ್ಫೆಕ್ಟ್ ಮಾಡಿಯೆ ವಿಮಾನಕ್ಕೆ ಹತ್ತಿಸಲಾಗುತ್ತದೆ. ಇನ್ನು ಬೆಂಗಳೂರಿನಿಂದ ಬರುವ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಲಾಗುವುದಲ್ಲದೆ ಎಲ್ಲರ ವಿವರವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದು ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ. ನಿರ್ದೇಶಕ ಜ್ಣಾನೇಶ್ವರ ರಾವ್ ತಿಳಿಸಿದರು.

ಇಂದಿನಿಂದ ಸ್ಟಾರ್ ಏರ್ ಸಂಸ್ಥೆಯು ತನ್ನ ವಿಮಾನ ಸಂಚಾರ ಸೇವೆ ಅರಂಭಿಸಿದ್ದು, ಅಲಾಯನ್ಸ್ ಏರ್ ಸಹ ಶೀಘ್ರದಲ್ಲಿಯೆ ಸೇವೆ ಆರಂಭಿಸಲಿದೆ ಎಂದು ಜ್ಣಾನೇಶ್ವರ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ