ಕಲಬುರಗಿ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಂಡರು ಕೆಲವರು ಉಲ್ಲಂಘನೆ ಮಾಡುತ್ತಿರುವುದು ಕಂಡು ಬರುತ್ತಿದೆ. ಅಂಥವರ ವಿರುದ್ಧ ಮುಲಾಜಿಲ್ಲೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಶರತ್ ಎಚ್ಚರಿಕೆ ನೀಡಿದ್ದಾರೆ.
ಸೋಂಕು ತಡೆಗೆ ಕೊರೊನಾ ವಾರಿಯರ್ಸ್ ಶ್ರಮಿಸುತ್ತಿದ್ದರು ಅದನ್ನು ಕಡೆಗಣಿಸುವವರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಆದರೆ ಹಲವರು ಗೃಹ ಬಂಧನ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಲು ಮುಂದಾಗುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೋವಿಡ್-19 ಸೋಂಕಿತ ವ್ಯಕ್ತಿಯ ಎರಡನೇ ಸಂಪರ್ಕದಲ್ಲಿ ಬಂದ ವ್ಯಕ್ತಿಗಳನ್ನು, ಹೊರ ರಾಜ್ಯದಿಂದ ಬಂದ ಗರ್ಭಿಣಿ ಮಹಿಳೆಯರು, 10 ವರ್ಷದೊಳಗಿನ ಮಕ್ಕಳು, 65ವರ್ಷ ಮೇಲ್ಪಟ್ಟ ಹಿರಿಯರು ಇನ್ನಿತರ ರೋಗಗಳಿಂದ ಬಳಲುತ್ತಿರುವವರ ಹಿತದೃಷ್ಟಿಯಿಂದ ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ನಡುವೆ ಕೆಲವರು ಹೋಂ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿರುವುದು ಗಮನಕ್ಕೆ ಬಂದಿದೆ. ಮೊದಲ ಬಾರಿಗೆ ಈ ರೀತಿಯಾಗಿ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಕೂಡಲೆ ಅಂತವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ದಾಖಲಿಸಲಾಗುತ್ತದೆ. ತದನಂತರವು ಮೇಲಿಂದ ಮೇಲೆ ಇದೇ ರೀತಿ ತಪ್ಪು ಮಾಡಿದರೆ ಅಂತಹವರನ್ನು ಬಂಧಿಸಿ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail