NEWSದೇಶ-ವಿದೇಶನಮ್ಮರಾಜ್ಯ

ಕಳ್ಳದಾರಿಯಲ್ಲಿ ಕರ್ನಾಟಕ ಪ್ರವೇಶಿಸುತ್ತಿರುವ ತಮಿಳಿಗರು

ಓಡಾಡಲು 2-3 ಸಾವಿರ ರೂ.ಗೆ ನಕಲಿ ಪಾಸ್‌, ಐಡಿ ಕಾರ್ಡ್‌ ಸೃಷ್ಟಿಸುತ್ತಿರುವ ಸ್ಥಳೀಯರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳ್ಳದಾರಿಯಲ್ಲಿ ಕರ್ನಾಟಕ ಪ್ರವೇಶಿಸುತ್ತಿರುವ ತಮಿಳಿಗರು ರಾಜ್ಯಕ್ಕೆ ಬಳುವಳಿಯಾಗಿ ಕೊರೊನಾ ಹಂಚಲು ಸಜ್ಜಾದಂತೆ ಕಂಡು ಬರುತ್ತಿದೆ.

ಕರ್ನಾಟಕ ತಮಿಳುನಾಡು ಗಡಿಯಾದ ಅತ್ತಿಬೆಲೆ ಬಳಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವವರಿಗೆ ಸ್ಥಳೀಯರು ಹಣದ ಮೋಹಕ್ಕೆ ಬಲಿಯಾಗಿ ನಕಲಿ ಪಾಸ್‌ನೀಡಿ ರಾಜ್ಯಕ್ಕೆ ಬರುವವರಿಗೆ ಸಹಕರಿಸುತ್ತಿದ್ದಾರೆ. ಇದು ಕೊರೊನಾ ವಿಶ್ವಮಾರಿ ಕಾಡುತ್ತಿರುವ ಈ ಹೊತ್ತಿನಲ್ಲಿ ನಿಜಕ್ಕೂ ಆತಂಕ ಮೂಡಿಸುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕರ್ನಾಟಕದಿಂದ ತಮಿಳುನಾಡಿಗೆ ಹೋಗುವ ಲಾರಿಗಳು, ಬೈಕ್‌ಗಳ ಸವಾರರು ತಮಿಳುನಾಡು ಪ್ರವೇಶಿಸುತ್ತಿದ್ದಂತೆ ಅಲ್ಲಿಂದ ಕರ್ನಾಟಕಕ್ಕೆ ಬರಲು ಕಾದು ಕುಳಿತಿರುವವರಿಂದ 2ಸಾವಿರದಿಂದ 3 ಸಾವಿರ ರೂ. ಪಡೆದು ಅವರಿಗೆ ಬೇಕಾದ ಪಾಸ್‌ ಮತ್ತು ಐಡಿ ಕಾರ್ಡ್‌ಗಳನ್ನು ಸೃಷ್ಟಿಸಿಕೊಡುತ್ತಿದ್ದಾರೆ.

ತಮಿಳುನಾಡಿನಲ್ಲಿ ಈಗಾಗಲೇ ಕೊರೊನಾ ಅಟ್ಟಹಾಸ ಹೆಚ್ಚಾಗಿರುವ ಈ ಸಮಯದಲ್ಲಿ ರಾಜ್ಯಕ್ಕೆ ಅಲ್ಲಿಂದ ಬರುವ ಜನರನ್ನು ಈ ರೀತಿ ಕೆಲ ಕಿಡಿಗೇಡಿಗಳು ಕಳುಹಿಸಿಕೊಡಲು ನಕಲಿ ಐಡಿಕಾರ್ಡ್‌ ಪಾಸ್‌ ಸೃಷ್ಟಿಕೊಂಡು ಕಾಯುತ್ತಿರುವುದು ಈಗ ಗಡಿ ಭಾಗದ ಜನರಲ್ಲಿ ಆತಂಕ ಹೆಚ್ಚಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಅಲ್ಲದೆ ಸೂಕ್ತ ಪೊಲೀಸ್‌ ಭದ್ರತೆ ಇಲ್ಲದೆ ಈರೀತಿ ನುಸುಳುಕೋರರಿಗೆ ಅನುಕೂಲವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಅಲ್ಲದೆ ಈಗ ಇರುವ ಪೊಲೀಸರು ಕೂಡ ಸ್ಥಳೀಯರೊಂದಿಗೆ ಸೇರಿ ಗಡಿಯಿಂದ ರಾಜ್ಯಕ್ಕೆ ಬರುವವರಿಗೆ ಎಡೆಮಾಡಿಕೊಡುತ್ತಿದಾರೆ ಎಂಬ ದೂರು ಕೇಳಿಬರುತ್ತಿದೆ.

ಕೊರೊನಾ ಸೋಂಕು ಇಡೀ ವಿಶ್ವವನ್ನೇ ಬಾಧಿಸುತ್ತಿರುವ ಈ ಸಮಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ರಾಜ್ಯಕ್ಕೆ ಬರುವವರಿಗೆ ಅವಕಾಶ ಮಾಡಿಕೊಡುವುದು ರಾಜ್ಯ-ರಾಜ್ಯಗಳ ನಡುವೆ ವೈರಸ್‌ ರುದ್ರ ನರ್ತನಕ್ಕೆ ರಹದಾರಿ ನೀಡಿದಂತ್ತಾಗುತ್ತದೆ. ಆದ್ದರಿಂದ ಸ್ಥಳೀಯರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಜತೆಗೆ ಪೊಲೀಸರು ತಮ್ಮ ಕರ್ತವ್ಯವನ್ನು ಹಣಕ್ಕಾಗಿ ಮಾರಿಕೊಳ್ಳದೆ ನಿಷ್ಠೆಯಿಂದ ನಿರ್ವಹಿಸಬೇಕಿದೆ.

ಇನ್ನು ಸಿಂಗಂ ಎಂದೇ ಕರೆಸಿಕೊಳ್ಳುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣವರ ಅವರು ಕೂಡ ಇಂಥ ಸ್ಥಳದಲ್ಲಿ ಭದ್ರತೆಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ.  ಅದನ್ನು ಬಿಟ್ಟು ಮೀಸೆ ತಿರುವಿಕೊಂಡು ಓಡಾಡುವುದೆ ಕಾಯಕವಾಗಬಾರದು ಎಂಬುವುದು ಸ್ಥಳೀಯರು ಮನವಿಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು