ಮೈಸೂರು: ದಸರಾ ಆನೆಗಳಿಗೆ ನಿತ್ಯ ಅರಮನೆಯಿಂದ ಬನ್ನಿ ಮಂಟಪದವರೆಗೆ ಬೆಳಗ್ಗೆ-ಸಂಜೆ ದೈನಂದಿನ ನಡಿಗೆ ತಾಲೀಮು

ಮೈಸೂರು: ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆ ತಾಲೀಮನ್ನು ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಈಗಾಗಲೇ ಆರಂಭಿಸಿದ್ದು, ಈ ತಾಲೀಮಿನಲ್ಲಿ ಗಜಪಡೆಯ ಮೊದಲ ಹಂತದ 9 ಆನೆಗಳು ಭಾಗವಹಿಸುತ್ತಿದ್ದಾವೆ.
ವಿಶ್ವ ಆನೆ ದಿನ ಈ ದಿನದಂದೇ ದಸರಾದ ಮೊದಲ ತಂಡದ ಗಜಪಡೆ ತಾಲೀಮನ್ನು ಆರಂಭಿಸಿದ್ದು, ವಿಶೇಷವಾಗಿತ್ತು. ಅಂದು (ಆ.12) ಬೆಳಗ್ಗೆ 7.30ಕ್ಕೆ ಅರಮನೆ ಮುಂಭಾಗದ ಕೋಡಿ ಸೋಮೇಶ್ವರ ದೇವಾಲಯದ ಬಳಿಯ ಆನೆ ಶಿಬಿರದಿಂದ ಹೊರಟ ಅಭಿಮನ್ಯು, ಧನಂಜಯ, ಭೀಮ, ಏಕಲವ್ಯ, ಮಹೇಂದ್ರ, ಕಂಜನ್, ಪ್ರಶಾಂತ ಹೆಣ್ಣಾನೆಗಳಾದ ಕಾವೇರಿ ಹಾಗೂ ಲಕ್ಷ್ಮೀ ಆನೆಗಳು ಅರಮನೆ ಮುಂಭಾಗದಿಂದ ಹೊರಟು ಬಲರಾಮ ದ್ವಾರದ ಮೂಲಕ ಕೆ.ಆರ್.ವೃತ್ತ, ಸಯ್ಯಾಜಿರಾವ್ ವೃತ್ತ, ಆಯುರ್ವೇದ ಆಸ್ಪತ್ರೆ ಸರ್ಕಲ್ನಿಂದ ಆರ್.ಎಂ.ಸಿ ಮಾರುಕಟ್ಟೆವರೆಗೆ ಸಾಗಿದವು.
ದಸರಾ ಗಜಪಡೆಗೆ ಭಾರ ಹೊರುವ ತಾಲೀಮು: ಎರಡನೇ ತಂಡದ ಆನೆಗಳು ಆಗಮಿಸಿದ ಬಳಿಕ ದಸರಾ ಗಜಪಡೆಗೆ ಭಾರ ಹೊರುವ ತಾಲೀಮು ಆರಂಭವಾಗಲಿದೆ. ಹೌದು! ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡದ ಗಜಪಡೆಗೆ ತಾಲೀಮು ಆರಂಭವಾಗಿದೆ. ಕಾಡಿನಲ್ಲಿ ಸಂಚರಿಸುತ್ತಿದ್ದ ಆನೆಗಳು ಜನಜಂಗುಳಿ, ವಾಹನಗಳ ಸಂಚಾರಕ್ಕೆ ಒಗ್ಗಿಕೊಳ್ಳುವಂತೆ ಮಾಡಲು ಅರಮನೆ ಆವರಣದಿಂದ ಆರ್‌ಎಂಸಿ ವೃತ್ತದವರೆಗೆ ತಾಲೀಮು ನಡೆಸಲಾಗುತ್ತಿದೆ.
ಮುಂದಿನ 15 ದಿನಗಳ ನಂತರ 2ನೇ ತಂಡದ ಆನೆಗಳನ್ನು ಕರೆತರಲಾಗುತ್ತದೆ. ಈ ನಿಟ್ಟಿನಲ್ಲಿ ಡಿಸಿಎಫ್ ಪ್ರಭುಗೌಡ ಅವರು ಅನುಮತಿಗಾಗಿ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಅನುಮತಿ ದೊರೆತ ಕೂಡಲೇ 2ನೇ ತಂಡದ ಆನೆಗಳನ್ನು ಅರಮನೆಗೆ ಸ್ವಾಗತಿಸಲಾಗುತ್ತದೆ. ಬಳಿಕ ಒಟ್ಟು 14 ಆನೆಗಳನ್ನು ಒಳಗೊಂಡಂತೆ ತಾಲೀಮು ಆರಂಭಿಸಲಾಗುತ್ತದೆ. ಈ ಹಂತದಲ್ಲಿ ಕೆಲವು ಆನೆಗಳಿಗೆ ಭಾರ ಹೊರುವ ತಾಲೀಮು ನಡೆಸಲಾಗುವುದು.
ನಡಿಗೆ ತಾಲೀಮು: ಆನೆಗಳಿಗೆ ದೈನಂದಿನ ತಾಲೀಮು ಅರಮನೆಯಿಂದ ಬನ್ನಿ ಮಂಟಪದವರೆಗೆ ಬೆಳಗ್ಗೆ ಮತ್ತು ಸಂಜೆ ನಡೆಯುತ್ತಿದೆ. ಈ ತಾಲೀಮಿನಲ್ಲಿ ಆನೆಗಳು ಜಂಬೂ ಸವಾರಿಯ ಮಾರ್ಗದಲ್ಲಿ ಪರಸ್ಪರ ಸಮನ್ವಯದಿಂದ ನಡೆಯುವ ಅಭ್ಯಾಸವನ್ನು ಕಲಿಯುತ್ತಿವೆ.
ಭಾರ ಹೊರುವ ತರಬೇತಿ: ನಾನಾ ಹಂತಗಳಲ್ಲಿ ಕ್ರಮೇಣ ಮರಳು ಮೂಟೆಗಳ ಭಾರ ಹೆಚ್ಚಿಸಿ ಮೂರು ಹಂತಗಳಲ್ಲಿ ಭಾರ ಹೊರುವ ತಾಲೀಮು ನೀಡಲಾಗುತ್ತದೆ. ಈ ಹಂತದಲ್ಲಿ ಅಂಬಾರಿ ಆನೆ ಅಭಿಮನ್ಯು ಹಾಗೂ ಭವಿಷ್ಯದಲ್ಲಿ ಈ ಜವಾಬ್ದಾರಿ ಹೊರುವ 2 ನೇ ಹಂತದ ಆನೆಗಳಿಗೆ ಭಾರ ಹೊರುವ ತಾಲೀಮು ನಡೆಸಲಾಗುತ್ತದೆ.
ಮರದ ಅಂಬಾರಿ ತಾಲೀಮು: ಭಾರ ಹೊರುವ ತಾಲೀಮಿನ ನಂತರ ಪ್ರಮುಖ ಆನೆಗಳಿಗೆ ಮರದ ಅಂಬಾರಿ ಹೊರುವ ತರಬೇತಿ ನೀಡಲಾಗುತ್ತದೆ. ಈ ತಾಲೀಮಿನ ಕಡೆ ಹಂತದಲ್ಲಿ ಅರಮನೆ ಒಳಾವರಣದಲ್ಲಿ ದಸರಾ ಜಂಬೂ ಸವಾರಿ ದಿನ ನಡೆಯುವ ಎಲ್ಲಾ ಪದ್ಧತಿಗಳನ್ನು ಒಳಗೊಂಡಂತೆ ಮರದ ತಾಲೀಮು ಮಾಡಿಸಲಾಗುತ್ತದೆ.
ಶಬ್ಧ ತಾಲೀಮು: ಮರದ ಅಂಬಾರಿ ಹೊತ್ತ ಬಳಿಕ ಆನೆಗಳಿಗೆ ಮುಖ್ಯವಾಗಿ ಶಬ್ಧ ತಾಲೀಮು ನಡೆಸಲಾಗುತ್ತದೆ. ಜಂಬೂ ಸವಾರಿ ವೇಳೆ ಅರಮನೆ ಬಳಿ ನಾನಾ ಸುತ್ತುಗಳಲ್ಲಿ ಕುಶಾಲತೋಪು ಸಿಡಿಸಲಾಗುತ್ತದೆ. ಈ ಸಂದರ್ಭದಲ್ಲಿಅವು ಬೆದರಿ ಸಾವಿರಾರು ಜನರ ನಡುವೆ ಯಾವುದೇ ಅವಾಂತರಗಳಾಗದಿರಲಿ ಎಂಬ ಕಾರಣಕ್ಕೆ ಆನೆಗಳ ಮುಂದೆ ಸಿಡಿಮದ್ದು ಸಿಡಿಸಿ ಅವುಗಳು ಶಬ್ಧಕ್ಕೆ ಅಂಜದಂತೆ ತರಬೇತಿ ನೀಡಲಾಗುತ್ತದೆ.
ಪೌಷ್ಟಿಕ ಆಹಾರ: ತಾಲೀಮಿನ ಜತೆಗೆ ಆನೆಗಳಿಗೆ ವಿಶೇಷ ಆಹಾರ ವ್ಯವಸ್ಥೆಯನ್ನು ಒದಗಿಸಲಾಗಿದೆ. ಮೊಳಕೆ ಕಾಳು, ಭತ್ತ, ಬೆಲ್ಲ, ಬೆಣ್ಣೆ, ಕೊಬ್ಬರಿ ಮತ್ತು ವಿವಿಧ ಸೊಪ್ಪುಗಳನ್ನು ಒಳಗೊಂಡ ಆಹಾರವನ್ನು ದಿನಕ್ಕೆ ಎರಡು ಬಾರಿ ನೀಡಲಾಗುತ್ತದೆ. ಅಭಿಮನ್ಯುವಿಗೆ ಹೆಚ್ಚಿನ ಬೆಣ್ಣೆ ಮತ್ತು ಕಬ್ಬಿನ ಜತೆ ವಿಶೇಷ ಆಹಾರ ನೀಡಲಾಗುತ್ತಿದೆ.
ತಾಲೀಮಿನ ಬಗ್ಗೆ ಡಿಸಿಎಫ್ ಪ್ರಭುಗೌಡ ಹೇಳಿದ್ದೇನು?: ಈಗಾಗಲೇ ದಸರಾ ಗಜಪಡೆಗೆ ಜಂಬೂ ಸವಾರಿ ತಾಲೀಮನ್ನು ಆರಂಭಿಸಲಾಗಿದ್ದು, ಮೊದಲ ಹಂತವಾಗಿ 9 ಆನೆಗಳ ತಾಲೀಮನ್ನು ಆರ್.ಎಂ.ಸಿ ಮಾರುಕಟ್ಟೆ ಸರ್ಕಲ್ವರೆಗೆ ನಡೆಸಲಾಯಿತು. ಎಲ್ಲ ಆನೆಗಳ ಆರೋಗ್ಯ ಪರೀಕ್ಷೆಯನ್ನು ವೈದ್ಯರು ಮಾಡಿದ್ದು, ಎಲ್ಲ ಆನೆಗಳು ಆರೋಗ್ಯವಾಗಿವೆ. ಆನೆಗಳಿಗೆ ಸಾಮಾನ್ಯ ಆಹಾರದ ಜೊತೆಗೆ ವಿಶೇಷ ಆಹಾರಗಳನ್ನು ಸಹ ನೀಡಲಾಗುತ್ತಿದೆ. ಮೊದಲ ಹಂತದ 9 ಆನೆಗಳು ಈಗಾಗಲೇ ಹಲವು ದಸರಾಗಳಲ್ಲಿ ಭಾಗಿ ಆಗಿರುವುದರಿಂದ ಈ ಎಲ್ಲ ಆನೆಗಳು ಶಬ್ದಕ್ಕೆ, ಇಲ್ಲಿಯ ವಾತಾವರಣಕ್ಕೆ ಹೊಂದಿಕೊಂಡಿವೆ. ನಮಗೆ ಯಾವುದೇ ಭಯ ಇಲ್ಲ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...