NEWSಕೃಷಿನಮ್ಮರಾಜ್ಯ

ಕೃಷಿಬದು, ಕೃಷಿಹೊಂಡ ನಿರ್ಮಾಣಕ್ಕೆ ಆದ್ಯತೆ ಕೊಡಿ

ಬೇಡಿಕೆ ಇರುವ ಎಲ್ಲರಿಗೂ ಜಾಬ್ ಕಾರ್ಡ್ ಮಾಡಿಕೊಡಿ l  ಗ್ರಾಮೀಣಾಭಿವೃದ್ಧಿ ಸಚಿವ  ಈಶ್ವರಪ್ಪ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಬೇಡಿಕೆ ಇರುವ ಎಲ್ಲರಿಗೂ ನರೇಗಾ ಯೋಜನೆಯಡಿ  ಜಾಬ್‍ಕಾರ್ಡ್ ನೀಡಿ, ರೈತರ ಜಮೀನುಗಳಲ್ಲಿ ಕೃಷಿಬದು ಹಾಗೂ ಕೃಷಿಹೊಂಡಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಬೆಳಗ್ಗೆ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಜರುಗಿದ ಪಂಚಾಯತರಾಜ್ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕೃಷಿಗೆ ಫಲವತ್ತಾದ ಭೂಮಿ ಮತ್ತು ನೀರು ಅಗತ್ಯ.  ನರೇಗಾ ಯೋಜನೆಯಲ್ಲಿ ರೈತರಿಗೆ ಅಗತ್ಯ ಉದ್ಯೋಗ ಕಲ್ಪಿಸುವುದರೊಂದಿಗೆ ಜಮೀನುಗಳಲ್ಲಿ ಕೃಷಿಬದು ನಿರ್ಮಾಣ ಹಾಗೂ ಕೃಷಿಹೊಂಡಗಳನ್ನು ಮಾಡುವ ಮೂಲಕ ಅಂತರಜಲ ಹೆಚ್ಚಿಸಬೇಕು. ಉತ್ತಮವಾದ ಮಳೆ ಆಗುತ್ತಿರುವುದರಿಂದ ಕೃಷಿಗೆ ಪೂರಕವಾದ ಕಾರ್ಯಗಳನ್ನು ರೈತರು ಅನುಸರಿಸುವಂತೆ ಅಧಿಕಾರಿಗಳು ಮನವರಿಕೆ ಮಾಡಿಕೊಡಬೇಕೆಂದು ಸಚಿವರು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ ಕೃಷಿಬದು, ಕೃಷಿಹೊಂಡ ಹಾಗೂ ಚೆಕ್‍ಡ್ಯಾಮ್‍ಗಳ ನಿರ್ಮಾಣ ಮತ್ತು ಪ್ರಗತಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿ, ಜಿಲ್ಲೆ ಇತರ ಜಿಲ್ಲೆಗಳಿಗೆ ಮಾದರಿಯಾಗಲಿದೆ. ಕೆರೆ ಹೂಳೆತ್ತುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಇದರಿಂದ ಬಹು ಜನರಿಗೆ ಉಪಯೋಗವಾಗುತ್ತದೆ. ಇಲಾಖೆಗೆ ವಿವಿಧ ಯೋಜನೆಗಳಿಗಾಗಿ ಬಿಡುಗಡೆಯಾದ ಅನುದಾನ ಪೂರ್ಣ ಬಳಕೆ ಆಗುವಂತೆ ಮತ್ತು ಅದು ಸಾರ್ಧಕ ರೀತಿಯಲ್ಲಿ ವೆಚ್ಚವಾಗುವಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದು  ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ್ ಮಾತನಾಡಿ, ಜಿಲ್ಲೆಯಲ್ಲಿ 1,38,880 ಉದ್ಯೋಗ ಚೀಟಿ ವಿತರಿಸಲಾಗಿದ್ದು, 3,49,764 ಕಾರ್ಮಿಕರು ಇದ್ದಾರೆ. ಇದರಲ್ಲಿ 63,039 ಉದ್ಯೋಗ ಚೀಟಿ ಮತ್ತು 1,26,352 ಜನ ಸಕ್ರಿಯವಾದ ಕಾರ್ಮಿಕರಿದ್ದಾರೆ. 1,57,403 ಜನ ಮಹಿಳಾ ಕಾರ್ಮಿಕರಿದ್ದು, ಇದರಲ್ಲಿ 54,483 ಜನ ಸಕ್ರಿಯ ಮಹಿಳಾ ಕಾರ್ಮಿಕರಿದ್ದಾರೆ. 626 ಹೊಸ ಉದ್ಯೋಗ ಚೀಟಿ ವಿತರಿಸಲಾಗಿದೆ ಎಂದು ಹೇಳಿದರು.

ಕೃಷಿಬದು ನಿರ್ಮಾಣ ಅಭಿಯಾನದಲ್ಲಿ ಜಿಲ್ಲೆಯ ರೈತರ ಜಮೀನುಗಳಲ್ಲಿ ಗ್ರಾಮಪಂಚಾಯಿತಿಗಳಿಂದ 31,136 ಮತ್ತು ಕೃಷಿ ಇಲಾಖೆಯಿಂದ 7,325 ಸೇರಿ ಒಟ್ಟು 38,461 ಕೃಷಿ ಬದುಗಳನ್ನು ನಿರ್ಮಿಸಲಾಗಿದೆ. ಮತ್ತು ಗ್ರಾಮ ಪಂಚಾಯಿತಿಗಳಿಂದ 384 ಹಾಗೂ ಕೃಷಿ ಇಲಾಖೆಯಿಂದ 105 ಹೀಗೆ ಒಟ್ಟು 489 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದು ಸಿಇಒ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಮಾತನಾಡಿ, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ 2019-20ನೇ ಸಾಲಿಗೆ 16,691 ಮತ್ತು 2020-21 ನೇ ಸಾಲಿಗೆ 1,738 ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು, ಒಟ್ಟು 2,302 ಲಕ್ಷ ರೂ.ಗಳ ಆರ್ಥಿಕ ಸಾಧನೆ ಮಾಡಲಾಗಿದೆ. ಅಂಗನವಾಡಿಗಳಲ್ಲಿ ನೂತನವಾಗಿ 37 ಶೌಚಾಲಯ ನಿರ್ಮಿಸಲಾಗಿದ್ದು, 168 ಹಳೇ ಶೌಚಾಲಯಗಳನ್ನು ದುರಸ್ತಿ ಮಾಡಲಾಗಿದೆ. ಶಾಲೆಗಳಲ್ಲಿ ಹೊಸದಾಗಿ 52 ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು, 2 ಕಾಮಗಾರಿಗಳು ಮುಕ್ತಾಯವಾಗಿದ್ದು, 50 ಪ್ರಗತಿಯಲ್ಲಿವೆ. ಘನ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಆರಂಭಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ವಿವಿಧ ಇಲಾಖೆ ಅಧಿಕಾರಿಗಳು ಮಾತನಾಡಿ, ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆ, ಕುಡಿಯುವ ನೀರಿನ ಕಾಮಗಾರಿ, ನೆರೆ ಪರಿಹಾರ ಕಾಮಗಾರಿಗಳ ಪ್ರಗತಿ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಕುಸುಮಾವತಿ ಶಿವಳ್ಳಿ, ಜಿಲ್ಲಾ ಪಂಚಾಯಿತಿ  ಉಪಾಧ್ಯಕ ಶಿವಾನಂದ ಕರಿಗಾರ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ದೀಪಕ್ ಮಡಿವಾಳರ, ಕೃಷಿ ಇಲಾಖೆ ಜಂಟಿನಿರ್ದೇಶಕ ರಾಜಶೇಖರ್ ಐ.ಬಿ., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ. ರಾಮಚಂದ್ರ ಕೆ.ಎಂ. ಸೇರಿದಂತೆ ಆರ್.ಡಿ.ಪಿ.ಆರ್., ಲೋಕೊಪಯೋಗಿ, ಸಣ್ಣ ನೀರಾವರಿ, ಅರಣ್ಯ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು