ಬೆಂಗಳೂರು : ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಗೊಳಗಾಗದೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ವಿವಿಧ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್ ಭೇಟಿ, ಪಡಿತರ ವಿತರಣೆಯಲ್ಲಿ ಆಗುತ್ತಿರುವ ಲೋಪಗಳನ್ನು ಪರಿಶೀಲಿಸಿ ಅಂಗಡಿಗಳ ಮಾಲೀಕರಿಗೆ ಈ ಎಚ್ಚರಿಕೆ ನೀಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಹೊನ್ನೇನಹಳ್ಳಿ, ಬಿಲ್ಲಿನಕೋಟೆ ಹಾಗೂ ಶಿವಗಂಗೆ ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ಸಚಿವರು ಸಮರ್ಪಕ ಪಡಿತರ ವಿತರಣೆ ಜೊತೆಗೆ ವಲಸೆ ಬಂದಿರುವ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ ಸಹ ಅವರ ಆಧಾರ್ ಕಾರ್ಡ್ ನ ವಿವರ ಪಡೆದು ಪಡಿತರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರು ವಿತರಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಂದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ದೂರು ಹಿನ್ನೆಲೆ, ಭೇಟಿ ನೀಡಲಾಗುತ್ತಿದ್ದು, ತೂಕ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಬಡವರಿಗೆ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದ ಕಟ್ಟೆಕಡೆಯ ವ್ಯಕ್ತಿಯ ಹಸಿವು ನಿಗಿಸಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ವ್ಯಕ್ತ್ತಿಗಳಿಗೆ ಪಡಿತರ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುತ್ತಿದ್ದು, ಪ್ರತಿಯೊಬ್ಬರಿಗೂ 2 ಕೆಜಿ ಕಡಲೆಕಾಳು ಹಾಗೂ ರಾಗಿ ವಿತರಣೆ ಮಾಡುವ ಚಿಂತನೆ ಸರ್ಕಾರ ಹೊಂದಿದ್ದು, ಜೂನ್ ತಿಂಗಳಿಂದ ನೂತನ ಯೋಜನೆ ಜಾರಿಯಾಗಲಿದೆ ಎಂದು ಹೇಳಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಸುಬ್ರಹ್ಮಣ್ಯ, ನೆಲಮಂಗಲ ತಾಲೂಕು ತಹಸೀಲ್ದಾರ್ ಶ್ರೀನಿವಾಸಯ್ಯ ಹಾಗೂ ಇತರರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail