Friday, November 1, 2024
Crimeನಮ್ಮಜಿಲ್ಲೆ

ಭಾರಿ ಮಳೆಗೆ ಯುವತಿ ಸೇರಿ ಇಬ್ಬರು ಬಲಿ, ನೆಲಕ್ಕುರುಳಿದ ಮರಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುಮಹಾನಗರದಲ್ಲಿ ಮಂಗಳವಾರ  ಸುರಿದ ಭಾರಿ ಮಳೆಗೆ ಮರ ಬಿದ್ದು ಯುವತಿ ಸೇರಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಲಕ್ಷ್ಮೀದೇವಿ ನಗರದಲ್ಲಿ ಶಿಲ್ಪಾ (21) ಮತ್ತು ಬೇಗೂರಿನಲ್ಲಿ  ಹೇಮಾ (45) ಎಂಬುರೆಗೆ ಮಳೆಯ ಅವಂತರದಿಂದ ಮೃತಪಟ್ಟವರು. ನಗರದ ಬೇಗೂರು ಬಳಿ  ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯ ಮೇಲೆ ಮರದ ರೆಂಬೆ ಮುರಿದುಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಬೊಮ್ಮನಹಳ್ಳಿಯ ಬೇಗೂರಿನಲ್ಲಿ ಮಳೆಯಿಂದ ಪಾರಾಗಲು ಹೇಮಾ (45)  ಸ್ಕೂಟಿಯಲ್ಲಿ  ಮನೆಯತ್ತ ಹೋಗುತ್ತಿದ್ದರು. ಈ ವೇಳೆ ರಭಸವಾಗಿ ಬೀಸಿದ ಗಾಳಿಯಿಂದ ಮರ ಕೆಳಗೆ ಉರುಳಿದ್ದು, ಅದರ ರೆಂಬೆಗಳು ಹೇಮಾ ಅವರ ಸ್ಕೂಟಿಯ ಮೇಲೆ ಬಿದ್ದಿವೆ. ರೆಂಬೆಗಳ ಅಡಿಯಲ್ಲಿ ಸಿಲುಕಿದ ಹೇಮಾ ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ. ಪರಿಣಾಮ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಮತ್ತೊಂದೆಡೆ ಬೆಂಗಳೂರಿನ ಲಕ್ಷ್ಮೀದೇವಿ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಇಟ್ಟಿಗೆ ಕಲ್ಲು ಕೆಳಗೆ ಬಿದ್ದು 21 ವರ್ಷದ ಶಿಲ್ಪಾ ಎಂಬ ಯುವತಿ ಸಾವನ್ನಪ್ಪಿದ್ದಾರೆ. ಮನೆಯಲ್ಲೇ ಆಫೀಸ್ ಕೆಲಸ ಮಾಡುತ್ತಿದ್ದಾಗ ಮನೆ ಪಕ್ಕದ  ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲಿಂದ ಇಟ್ಟಿಗೆ  ಆಕೆ ತಲೆ ಮೇಲೆ ಬಿದ್ದಿದೆ.  ಅದನ್ನು ಗಮನಿಸಿದ ಮನೆಯವರು ಸ್ಥಳೀಯರ ಸಹಾಯದಿಂದ ಕೂಡಲೇ  ಆಸ್ಪತ್ರೆಗೆ ಯುವತಿಯನ್ನು ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯುವತಿ ಮೃತಪಟ್ಟ ಸಂಬಂಧ  ಲಕ್ಷ್ಮೀದೇವಿ ನಗರಕ್ಕೆ ಪಾಲಿಕೆ ಆಯುಕ್ತ ಅನಿಲ್‌ ಕುಮಾರ್‌ ಭೇಟಿ ನೀಡಿ ಮೃತ ಯುವತಿಯ ಮನೆಯವರಿಗೆ ಸಾಂತ್ವನ ಹೇಳಿದರು. ನಂತರ ಘಟನೆ ಸಂಬಂಧ ಮಾಹಿತಿ ಕಲೆಹಾಕಿದ ಅವರು, ಈ ಕುರಿತು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...