ಬೆಂಗಳೂರು: ರಾಜ್ಯದಲ್ಲಿ ಇಂದು 122 ಹೊಸ ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದು ಈ ವರೆಗೆ ರಾಜ್ಯದಲ್ಲಿ 45ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು ಕಲಬುರಗಿಯಲ್ಲಿ 28, ಯಾದಗಿರಿ 16, ದಕ್ಷಿಣ ಕನ್ನಡ 11, ಉಡುಪಿ 9, ಹಾಸನ 14, ಬೆಂಗಳೂರು 6, ಉತ್ತರ ಕನ್ನಡ 4, ರಾಯಚೂರು 5, ಬೆಳಗಾವಿ 4, ಚಿಕ್ಕಮಗಳೂರು 3, ಬೀದರ್ 13, ಬಳ್ಳಾರಿ ಮತ್ತು ಮಂಡ್ಯದಲ್ಲಿ ತಲಾ ಒಂದೊಂದು ಪ್ರಕಣರಣ ಪತ್ತೆಯಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2405ಕ್ಕೆ ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೊರೋನಾಗೆ ಬೀದರ್‌ನ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ ಸೋಂಕು ಪತ್ತೆಯಾಗಿತ್ತು. ಅವರನ್ನು P-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬ್ರೀಮ್ಸ್‌ನ ಐಸೋಲೇಷನ್ ವಾರ್ಡಿನಲ್ಲಿ ಇಂದು ಮೃತಪಟ್ಟಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದಲ್ಲಿ 151,876 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 151,876 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,346 ಮಂದಿ ಮೃತಪಟ್ಟಿದ್ದಾರೆ. 64,426 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,701,257 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 352,573 ಜನರು ಮೃತಪಟ್ಟಿದ್ದಾರೆ 2,445,243 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail