CRIMENEWSನಮ್ಮರಾಜ್ಯ

ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್‌ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್‌ ಕೊಡಿಸಿ ಎಂದು ದೂರು ನೀಡಲು ಪೊಲೀಸ್‌ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್‌ ಕೊಡಿಸುತ್ತೇವೆ ಎಂದ ಬೇಡಿಕೆ ಇಟ್ಟ ಆರಕ್ಷಕರು ಈಗ ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾರೆ.

ಹೌದು! ವಂಚನೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಲಂಚ ಪಡೆಯುತ್ತಿದ್ದ ವೇಳೆ ರಾಮಮೂರ್ತಿನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌, ಸಬ್‌ ಇನ್ಸ್‌ಪೆಕ್ಟರ್‌ ಹಾಗೂ ಖಾಸಗಿ ವ್ಯಕ್ತಿ ಇಮ್ರಾನ್ ಬಾಬು ಎಂಬಾತನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣರಾಜಪುರದ ನಿವಾಸಿ ಮಂಜುನಾಥ್ ಎಂಬುವರು, ತಮ್ಮ ಪತ್ನಿ ಕುಟುಂಬದ ಚಿನ್ನಾಭರಣ ಮತ್ತು ನಗದನ್ನು ಪರರಿಗೆ ಕೊಟ್ಟಿದ್ದು ಅದನ್ನು ವಾಪಸ್‌ ಆ ಅನ್ಯರಿಂದ ಕೊಡಿಸಿ ಎಂದು ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿ, ಆಭರಣಗಳನ್ನು ವಾಪಸ್ ಪಡೆಯಲು ಸಹಾಯ ಮಾಡಬೇಕಾದರೆ 2 ಲಕ್ಷ ರೂ. ಲಂಚವನ್ನು ನಮಗೆ ಕೊಡಬೇಕು ಎಂದು ಪೊಲೀಸ್‌ ಇನಸ್‌ಪೆಕ್ಟರ್‌ (PI) ರಾಜಶೇಖರ್ ಬೇಡಿಕೆ ಇಟ್ಟಿದ್ದಾನೆ. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರುದಾರ ಮಂಜುನಾಥ್ ನೀಡಿದ ಮಾಹಿತಿಯ ಆಧಾರದ ಮೇರೆಗೆ ಲೋಕಾಯುಕ್ತ ಎಸ್‌ಪಿ ಕೋನ ವಂಶಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಲಂಚಬಾಕರಿಗೆ ಬಲೆ ಬೀಸಲಾಯಿತು.

ದೂರುದಾರರು PSI ರುಮಾನ್ ಪಾಷಾ ಮತ್ತು ಇಮ್ರಾನ್ ಬಾಬು ಅವರಿಗೆ 1 ಲಕ್ಷ ರೂ.ಗಳನ್ನು ಹಸ್ತಾಂತರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ಬಂಸಿದ್ದಾರೆ.

ಬಳಿಕ ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಯಿತು. ಅವರ ಮಾಹಿತಿ ಆಧಾರದ ಮೇರೆಗೆ ಇನ್ಸ್‌ಪೆಕ್ಟರ್‌ ರಾಜಶೇಖರನನ್ನೂ ಬಂಧಿಸಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಲೋಕಾಯುಕ್ತ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!