ಬೆಂಗಳೂರು: ರಾಜ್ಯದಲ್ಲಿ ಇಂದು 135 ಹೊಸ ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ. ಈವರೆಗೂ 781 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ಇನ್ನು ರಾಜ್ಯದಲ್ಲಿ ಇಂದು ಮೂರು ಜನ ಕೊರೊನಾ ಸೋಂಕಿನಿಂದ ಬಲಿಯಾಗಿದ್ದು ಈ ಮೂಲಕ ಮೃತರ ಸಂಖ್ಯೆ 49ಕ್ಕೆ ಏರಿಕೆಯಾದಂತ್ತಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇಂದು ಕಲಬುರ್ಗಿ – 28 , ಉತ್ತರ ಕನ್ನಡ – 06, ಚಿಕ್ಕಮಗಳೂರು – 03, ದಕ್ಷಿಣ ಕನ್ನಡ – 11, ಯಾದಗಿರಿ – 16, ಹಾಸನ-14, ಉಡುಪಿ-09, ಬೆಂಗಳೂರು ನಗರ -06, ಬೆಂಗಳೂರು ಗ್ರಾಮಾಂತರ -02, ಬಳ್ಳಾರಿ -01, ಬೀದರ್-12, ಬೆಳಗಾವಿ-04, ರಾಯಚೂರು-05, ವಿಜಯಪುರ-02, ಮಂಡ್ಯ-01, ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಸಾವನ್ನಪ್ಪಿದವರ ವಿವರ
ಬೀದರ್: ರೋಗಿ-1712 ಬೀದರ್ನ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ ಸೋಂಕು ಪತ್ತೆಯಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ರೋಗಿಯು ಬ್ರೀಮ್ಸ್ನ ಐಸೋಲೇಷನ್ ವಾಡಿ9ನಲ್ಲಿ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19ನಿಂದ ಮೃತಪಟ್ಟವ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಯಾದಗಿರಿ: ರೋಗಿ-2301 ಸಾವು: ಯಾದಗಿರಿ ಜಿಲ್ಲೆಯ ನಿವಾಸಿ 69 ವರ್ಷದ ವೃದ್ಧೆ ಕೊರೊನಾ ವೈರಸ್ನಿಂದ ಸಾವನ್ನಪ್ಪಿದ್ದಾರೆ. ವೃದ್ಧೆಯು ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಹೊಂದಿದ್ದರು. ಅವರು ಮೇ 20ರಂದು ಮೃತಪಟ್ಟಿದ್ದರು. ಬಳಿಕ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಸದ್ಯ ವೃದ್ಧೆ ರಿಪೋರ್ಟ್ ಪಾಸಿಟಿವ್ ಬಂದಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ವಿಜಯಪುರ: ರೋಗಿ 2011: 80 ವರ್ಷದ ವೃದ್ಧನಿಗೆ ಮೇ 22ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಮೇ 26ರ ರಾತ್ರಿ ಹೃದಯಾಘಾತದಿಂದ ವೃದ್ಧ ಸಾವನ್ನಪ್ಪಿದ್ದರು.
ದೇಶದಲ್ಲಿ 145,456 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 139,049 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,172 ಮಂದಿ ಮೃತಪಟ್ಟಿದ್ದಾರೆ. 60,706 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,603,587 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 348,194 ಜನರು ಮೃತಪಟ್ಟಿದ್ದಾರೆ 2,381,855 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail