NEWSಕೃಷಿದೇಶ-ವಿದೇಶ

ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳು ರಾಜ್ಯಕ್ಕೆ ಬಂದರೆ ಗತಿಯೇನು

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆತಂಕ l ಮುಂಜಾಗ್ರತಾ ಕ್ರಮಕ್ಕೆ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳು ಮಹಾರಾಷ್ಟ್ರ ಪ್ರವೇಶಿಸಿದ್ದು ಕರ್ನಾಟಕಕ್ಕೂ ಪ್ರವೇಶಿಸುವ ಆತಂಕವಿದೆ.  ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕ್ಷಣಾರ್ಧದಲ್ಲಿ ಬೆಳೆ ತಿಂದು ಹೋಗುವ ಈ ಮಿಡತೆಗಳು ಭವಿಷ್ಯದಲ್ಲಿ ಆಹಾರ ಕೊರತೆಗೆ ಕಾರಣವಾಗುತ್ತವೆ.   ರಾಜ್ಯಕ್ಕೂ ಇವುಗಳ ಭೀತಿ ಇರುವುದರಿಂದ ಸರ್ಕಾರ ಕೂಡಲೇ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶದ ಅಭಿಪ್ರಾಯ ಪಡೆದು ಕಾರ್ಯತಂತ್ರಗಳಿಗೆ ಸಿದ್ಧವಾಗಬೇಕು ಎಂದು ಸಲಹೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಮಿಡತೆಗಳ ಹಿಂಡು ಸದ್ಯ ಮಹಾರಾಷ್ಟ್ರದ ಅಮರಾವತಿಯಲ್ಲಿವೆ ಎಂಬ ಮಾಹಿತಿ ಇದೆ. ಅಮರಾವತಿ ಭೌಗೋಳಿಕವಾಗಿ ನಮ್ಮ ಬೀದರ್, ಕಲಬುರ್ಗಿಗೆ ಹತ್ತಿರದ ಜಿಲ್ಲೆ. ಪೂರ್ವ ಆಫ್ರಿಕಾ, ಇರಾನ್ ಮರುಭೂಮಿಯಲ್ಲಿ ಕಂಡುಬರುವ ಈ ಮಿಡತೆಗಳು ಪಾಕಿಸ್ತಾನದ ಮೂಲಕ ಭಾರತ ಪ್ರವೇಶಿಸಿವೆ. ಇವುಗಳಿಗೆ ಜಿಲ್ಲೆಗಳನ್ನು ದಾಟುವುದು ಅಸಾಧ್ಯವೇನಲ್ಲ ಎಂದು ಹೇಳಿದ್ದಾರೆ.

1 ಚದರ ಕಿ.ಮೀ ಪ್ರದೇಶದಲ್ಲಿ 4ಕೋಟಿ ಮಿಡತೆಗಳು ಇರುತ್ತವೆ. ತಮ್ಮ ದೇಹ ಗಾತ್ರದದಷ್ಟೇ ಆಹಾರವನ್ನು ಈ ಮಿಡತೆಗಳು ತಿನ್ನುತ್ತವೆ ಎಂದರೆ, ಇವು ಯಾವ ಪ್ರಮಾಣದಲ್ಲಿ ಬೆಳೆ ನಾಶ ಮಾಡುತ್ತವೆ ಎಂಬುದನ್ನು ಲೆಕ್ಕಿಸಬಹುದು. ಹೀಗಾಗಿ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶದಲ್ಲಿ ಔಷಧ ಸಿಂಪಡಣೆ ದೊಡ್ಡ ಪ್ರಮಾಣದಿಂದ ನಡೆಯುತ್ತಿದೆ ಎಂದು ತಮ್ಮ ಟ್ವಿಟ್‌ನಲ್ಲಿ ವಿವರಿಸಿದ್ದಾರೆ.

ಜತೆಗೆ ಸಂಭಾವ್ಯ ಅಪಾಯವನ್ನು ಮೊದಲೇ ಹಿಮ್ಮೆಟ್ಟಿಸಬೇಕು. ಬೆಳೆ ತಿಂದು ರೈತರ ಬದುಕು ಅತಂತ್ರ ಮಾಡುವ ಈ ರಕ್ಕಸ ಮಿಡತೆಗಳು ರಾಜ್ಯಕ್ಕೆ ಬಾರದೇ ಇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ