ಬೆಂಗಳೂರು: ಕೊರೊನಾ ಸೊಂಕು ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಈ ಬಾರಿಯ ಸವಾಲಿನಿಂದ ಕೂಡಿದೆ. ಆದರೂ ಜೂನ್ 25ರಿಂದ ಆರಂಭವಾಗಲಿರುವ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಇದಲ್ಲದೇ ಜೂನ್ 18ರಂದು ಪಿಯುಸಿ ಇಂಗ್ಲಿಷ್ ಪರೀಕ್ಷೆಯೂ ನಡೆಯಲಿದ್ದು, ಸದ್ಯ ಈಗ ಮುಗಿದಿರುವ ಪಿಯುಸಿ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಎಲ್ಲಾ ಉಪ್ಯಾಸಕರು ಹಾಜರಾಗಬೇಕು ಎಂದು ಮತ್ತೊಂದು ಪತ್ರ ಬರೆದಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಎಸ್ಸೆಸ್ಸೆಲ್ಸಿ ಪರೀಕ್ಷೆ ಅತ್ಯಂತ ಸುರಕ್ಷಿತ ಹಾಗೂ ಮಕ್ಕಳ ಶ್ರೇಯಸ್ಸಿಗೆ ಪೂರಕವಾಗಿ ನಡೆಯಲು ಎಲ್ಲ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಸಾಮರ್ಥ್ಯದ ಓರೆಗಲ್ಲಾಗಿರುವ ಈ ಬಾರಿಯ ಪರೀಕ್ಷೆಯನ್ನು ಸುಗಮವಾಗಿ ನಿರ್ವಹಣೆ ಮಾಡಲು ತಾವು ಸಹಕರಿಸಬೇಕು ಎಂದು ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ನಡುವೆ ವ್ಯಕ್ತಿಗತ ಅಂತರ ಕಾಪಾಡುವುದು ಸೇರಿ ಇಲಾಖೆ ಕೈಗೊಂಡಿರುವ ಉಪಕ್ರಮಗಳನ್ನು ಪಾಲಿಸಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸೇರಿದಂತೆ ಬಹುತೇಕ ಸಂಘ ಸಂಸ್ಥೆಗಳು ಸರ್ಕಾರದ ಜತೆ ಕೈ ಜೋಡಿಸಿವೆ ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪರೀಕ್ಷೆ ವೇಳೆ ಅನಾರೋಗ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಇದರಿಂದ ಇತರೆ ವಿದ್ಯಾರ್ಥಿಗಳ ಹಿತ ರಕ್ಷಣೆ ಸಾಧ್ಯವಾಗಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆಗಾಗಿ ಸೂಕ್ತ ವ್ಯವಸ್ಥೆ ಮಾಡಬೇಕು. ಪ್ರತಿ ವಿದ್ಯಾರ್ಥಿ ಮತ್ತು ಪೋಷಕರನ್ನು ಭೇಟಿ ಮಾಡಿ ಪರೀಕ್ಷೆ ಕುರಿತು ಆತ್ಮ ವಿಶ್ವಾಸ ತುಂಬಬೇಕು ಎಂದು ಕೋರಿದ್ದಾರೆ.
ಇನ್ನು ಬಾಕಿ ಉಳಿದಿರುವ ಇಂಗ್ಲಿಷ್ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸಲಾಗುವುದು. ಹಾಗೆಯೇ ಮೌಲ್ಯಮಾಪಕರ ಹಿತವನ್ನೂ ಕಾಯಲಾಗುವುದು ಎಂದು ಭರವಸೆ ನೀಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail