NEWSಕೃಷಿನಮ್ಮರಾಜ್ಯ

ಬೆಳೆ ನಾಶ ಮಾಡುವ ರಕ್ಕಸ ಮಿಡತೆಗಳ ನಿಯಂತ್ರಣಕ್ಕೆ ಕಾರ್ಯತಂತ್ರ

ಮೈಸೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ   ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆರ್ಶೀವಾದ ಪಡೆದರು.

ಈ ವೇಳೆ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ರಕ್ಕಸ ಮಿಡತೆಗಳು ಬೆಳೆ ನಾಶ ಪಡಿಸುತ್ತಿದ್ದು, ರಾಜ್ಯದಲ್ಲಿ ಕೃಷಿ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆ ಒಟ್ಟಿಗೆ ಸಭೆ ನಡೆಸಿ ಮಿಡತೆಗಳ ನಿಯಂತ್ರಣಕ್ಕೆ ಕಾರ್ಯತಂತ್ರ ರೂಪಿಸಲಾಗುವುದು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕೇಂದ್ರ ಸರ್ಕಾರ ಸಂಕಷ್ಟದ ಕಾಲದಲ್ಲಿ ಅತ್ಯುತ್ತಮವಾದ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. 20 ಲಕ್ಷ ಕೋಟಿ ರೂಪಾಯ ಪ್ಯಾಕೇಜ್ ಇನ್ನೂ ಇಲಾಖಾವಾರು ಹಂಚಿಕೆಯಾಗಿಲ್ಲ. ಅದರಲ್ಲಿ ಜಲ ಸಂಪನ್ಮೂಲ ಇಲಾಖೆಗೆ ಎಷ್ಟು ಸಿಗುತ್ತದೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ ಎಂದು ಮಾಹಿತಿ ನೀಡಿದರು.

ಕೃಷಿಗೆ ನೀರು ಹರಿಸುವ ವಿಚಾರ ಸಂಬಂಧ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ರಾಜ್ಯದ ಜಲಾಶಯಗಳ ಸ್ಥಿತಿಗತಿ ಗಮನಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕಾವೇರಿ ಹಾಗೂ ಕಬಿನಿ ಜಲಾಶಯಗಳು ಅಂತರರಾಜ್ಯ ಸಂಬಂಧ ಹೊಂದಿವೆ. ಈ ಜಲಾಶಯಗಳಿಂದ ನೀರು ಹರಿಸಲು ಕೇಂದ್ರೀಯ ಜಲ ಮಂಡಳಿಯಲ್ಲಿ ಅಧಿಕಾರಿಗಳ ಸಭೆ ನಡೆದಿದೆ.  ಸಭೆಯಲ್ಲಿ ನೀರು ಹರಿಸುವ ಸಂಬಂಧ ಚರ್ಚೆಯಾಗಿದೆ ಎಂದು ತಿಳಿಸಿದರು.

ಅಂತರ್‍ಜಲ ಮಟ್ಟ ಹೆಚ್ಚಿಸಲು ರೈತರು ತುಂತುರು ನೀರಾವರಿ ಮೂಲಕ ವ್ಯವಸಾಯ ಮಾಡುವುದು ಒಳ್ಳೆಯದು. ಅಂತರ್ಜಲ ಮಟ್ಟ ಹೆಚ್ಚಿಸಲು ಇಲಾಖೆ ವತಿಯಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ