NEWSನಮ್ಮರಾಜ್ಯ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಸಿಎಂ ಕೆಳಗಿಳಿಸುವರೆ ತ್ರಿಮೂರ್ತಿಗಳು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು ಪಕ್ಷದ ಹಿರಿಯ ಶಾಸಕರು ಎರಡು ಬಾರಿ ಸಿಎಂ ಯಡಿಯೂರಪ್ಪ ವಿರುದ್ಧ ಸಭೆ ನಡೆಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಸಚಿವಾಕಾಂಕ್ಷಿ ಆಗಿದ್ದ  ಹಿರಿಯರು  ಅನ್ಯ ಪಕ್ಷದಿಂದ ಬಂದವರಿಗೆ ಸಚಿವಸ್ಥಾನ ನೀಡಿದ್ದಕ್ಕೆ ಬೇಸರಗೊಂಡಿದ್ದು, ಅದು ಇಲ್ಲಿ ವರೆಗೆ ಬೂದಿ ಮುಚ್ಚಿದ ಕೆಂಡದಂತ್ತಿತ್ತು. ಆದರೆ ಕೊರೊನಾ ವಿಶ್ವಮಾರಿ ರಾಜ್ಯವನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಮೂಲಕ ಬಿಎಸ್‌ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ತಂತ್ರ ಹೆಣೆದಿದ್ದಾರೆ ಎಂದು ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇನ್ನು ಪಕ್ಷದ ಸುಮಾರು 27 ಶಾಸಕರು ಈ ಕುರಿತು ರಹಸ್ಯ ಸ್ಥಳದಲ್ಲಿ ಕಳೆದ 15 ದಿನಗಳಿಂದಲೂ ಸೇರುತ್ತಿದ್ದು, ಎರಡು ಬಾರಿ ಸಭೆಯನ್ನು ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಸಭೆ ನಡೆಸಿದವರಲ್ಲಿ ಪಕ್ಷದ ತ್ರಿಮೂರ್ತಿಗಳ ಪಾತ್ರ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಇದನ್ನು ಕೇಳಿದ ಸಿಎಂ ಬಿಎಸ್‌ವೈ ಅವರಿಗೆ ದಿಕ್ಕು ಕಾಣದಂತ್ತಾಗಿದ್ದು, ಕೆಲ ಸಚಿವರು ಮತ್ತು ಶಾಸಕರ ಸಲಹೆ ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಪಕ್ಷದಲ್ಲಿ ಹಿರಿಯರಾಗಿದ್ದರೂ ನಮಗೆ ಸಚಿವ ಸ್ಥಾನ ನೀಡಲು ಹಿಂದೆಟು ಹಾಕಿದ ಯಡಿಯೂರಪ್ಪ ಅವರು ಸಿಎಂ ಆಗಿ ಮುಂದುವರಿಯಲು ನಾವು ಅವಕಾಶ ಕೊಡಬಾರದು ಎಂದು ತ್ರಿಮೂರ್ತಿಗಳಾದ ಉಮೇಶ್‌ಕತ್ತಿ, ಮುರುಗೇಶ್‌ ನಿರಾಣಿ ಮತ್ತು ಬಸನಗೌಡ ಪಾಟೀಲ್‌ ಯತ್ನಾಳ್‌  ಅವರು ಸಿಡಿದೆದ್ದಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

27 ಶಾಸಕರನ್ನೊಳಗೊಂಡು ತ್ರಿಮೂರ್ತಿಗಳು ನಡೆಸಿದ ರಹಸ್ಯ ಸಭೆಯಿಂದ ಆತಂಕಗೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತ್ರಿಮೂರ್ತಿಗಳಲ್ಲಿ ಒಬ್ಬರನ್ನು ಕರೆದು  ಈ ಇಕ್ಕಟ್ಟಿನ ಪರಿಸ್ಥಿತಿಯನ್ನು ಶಮನ ಮಾಡಲು  ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಯಾವುದೇ ಸಭೆ ನಡೆಸಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದು ನೂರಕ್ಕೆ ನೂರು ಸುಳ್ಳು, ಆದರೆ ಭಿನ್ನಮತಿಯರು ಸಭೆ ಸೇರಿದ್ದಾರೋ ಇಲ್ಲವೋ ಎಂಬುವುದು ನಮಗೆ ತಿಳಿದಿಲ್ಲ.  ಆ ಬಗ್ಗೆ ಅವರನ್ನೇ ಕೇಳಿಕೊಳ್ಳಿ. ಬಿಎಸ್‌ವೈ ಅವರು ಹಿರಿಯರು ಅವರು ಪಕ್ಷಕ್ಕೆ ದುಡಿದಿದ್ದಾರೆ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇನ್ನು ಈ ಹಿಂದೆ ಸ್ವಾಮೀಜಿ ಒಬ್ಬರು ನಮಗೆ ಸಚಿವ ಸ್ಥಾನ ಕೊಡಬೇಕು ಎಂದಿದ್ದರು. ಆದರೆ ಅವರ ಮಾತಿನಲ್ಲಿ ತಪ್ಪೇನಿದೆ, ನಾನು ಸನ್ಯಾಸಿಯಲ್ಲ. ನಮಗೂ ಆಸೆ ಇದೆ.

l ಮುರುಗೇಶ್‌ ನಿರಾಣಿ, ಬಿಜೆಪಿ ಶಾಸಕರು

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...