NEWSನಮ್ಮರಾಜ್ಯವಿಜ್ಞಾನ

ಸರ್ಕಾರಕ್ಕೆ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಶ್ರಮಿಸಿ

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ಸರ್ಕಾರದ ಖಜಾನೆ ತುಂಬಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಲು ಮುಂದಾಗಬೇಕು ಎಂದು ಗಣಿ ಮತ್ತು  ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಸೂಚನೆ ನೀಡಿದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ನೂತನ ಮರಳು ನೀತಿ ಜಾರಿ ಮತ್ತು ನಿಯಮಗಳ ರಚನೆ, ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ವಲಯಗಳಲ್ಲಿ ಆಗಬೇಕಾದ ಅಗತ್ಯದ ಕಾರ್ಯಗಳು, ಇಲಾಖೆಯಿಂದ ಸರ್ಕಾರಕ್ಕೆ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಕೊಳ್ಳಬೇಕು.  ಲಾಕ್‌ಡೌನ್‌ ಸಡಿಲಿಸಿದ ಹಿನ್ನೆಲೆಯಲ್ಲಿ ಗೃಹ ಮತ್ತು ವಾಣಿಜ್ಯ ಕಟ್ಟಡಗಳ ನಿರ್ಮಾಣದಲ್ಲಿ ಹೆಚ್ಚಲಿರುವ ಮರಳು ಬೇಡಿಕೆಯನ್ನು ಸೂಕ್ತವಾಗಿ ನಿಭಾಯಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ  ನೀಡಿದರು.

ಕಳೆದ ಎಂಟು ತಿಂಗಳ ಅವಧಿಯಲ್ಲಿಇಲಾಖೆಯು ರಾಜ್ಯದ ರಾಜಸ್ವ ಹೆಚ್ಚಿಸುವ ನಿಟ್ಟಿನಲ್ಲಿ ನೂತನ ಮರಳು ನೀತಿ ಸೇರಿದಂತೆ ಕೈಕೊಂಡ ಹಲವಾರು ಅಭಿವೃದ್ಧಿ ಕಾರ್ಯಗಳ ಹಾಗೂ ಮುಖ್ಯ ಮತ್ತು ಉಪ ಖನಿಜಳಿಗೆ ಸಂಬಂಧಿಸಿದ ಕಾಯ್ದೆಗೆ ತರಲಾದ ತಿದ್ದುಪಡಿ ಕುರಿತು ಸಚಿವ ಸಿ.ಸಿ.ಪಾಟೀಲ್‌  ಸಿಎಂಗೆ ವಿವರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಾರ್ಮಿಕ ಹಾಗೂ ವಾರ್ತಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಎಂ ಮಹೇಶ್ವರ ರಾವ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಡಾ. ಶಿವಶಂಕರ್   ಭಾಗವಹಿಸಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು