CRIMENEWSನಮ್ಮರಾಜ್ಯಬೆಂಗಳೂರು

ವಾಹನಗಳ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿ ನೀಡಿ ಸೆ.12ರವರೆಗೆ ಕಾಲವಕಾಶಕೊಟ್ಟ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಇಂದು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ 11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು 09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ 26-06-2025 ಮತ್ತು 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು 05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು.

ಮುಂದುವರಿದು ಈ ಅವಧಿಯು ಮುಕ್ತಾಯವಾಗಿರುವುದರಿಂದ ಮತ್ತೆ ಕಾಲಾವಕಾಶವನ್ನು 23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿದ್ದರು. ಹಾಗಾಗಿ ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ವಿಸ್ತರಿಸಿದೆ.

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು 04-03-2025 ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರಿಂದ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿದ್ದರು.

ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!